ADVERTISEMENT

ಕೊಲೆ ಪ್ರಕರಣ; ನಾಲ್ವರಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2025, 7:56 IST
Last Updated 31 ಜುಲೈ 2025, 7:56 IST
<div class="paragraphs"><p>ಬಂಧನ (ಸಾಂದರ್ಭಿಕ ಚಿತ್ರ)</p></div>

ಬಂಧನ (ಸಾಂದರ್ಭಿಕ ಚಿತ್ರ)

   

ಕೋಲಾರ: ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪ ಸಾಬೀತಾಗಿದ್ದು, ಜಿಲ್ಲಾ ನ್ಯಾಯಾಲಯವು ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

2017ರಲ್ಲಿ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಂಗನೂರು ಕ್ರಾಸ್ ಬಳಿ ನಿವೇಶನ ವಿಚಾರವಾಗಿ ನಡೆದಿದ್ದ ಕೊಲೆ ಪ್ರಕರಣ ಇದಾಗಿದೆ. ಆಂಧ್ರಪ್ರದೇಶದ ಪುಂಗನೂರು ಮೂಲದ ಅಗಸ್ತ್ಯ ರೆಡ್ಡಿ (84) ಎಂಬುವರನ್ನು ಕೊಲೆ ಮಾಡಲಾಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ADVERTISEMENT

ನಾಲ್ವರು ಆರೋಪಿಗಳಾದ ರಜನಿಕುಮಾರ್‌, ಕೃಷ್ಣಾ ರೆಡ್ಡಿ, ಸುಬ್ರಮಣ್ಯಂ, ಜ್ಯೋತಿಷವರ್ ಎಂಬುವರು ಜೀವಾವಧಿ ಶಿಕ್ಷೆ ಒಳಗಾಗಿದ್ದಾರೆ. ಜೊತೆಗೆ ತಲಾ ₹ 25 ಸಾವಿರ ದಂಡ ವಿಧಿಸಲಾಗಿದೆ. ಕೋಲಾರ ಜಿಲ್ಲಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ಅಗಸ್ತ್ಯ ರೆಡ್ಡಿ ಪತ್ನಿ ಲಕ್ಷ್ಮಮ್ಮ ಹಾಗೂ ಮಗ ಮಾಧವ ರೆಡ್ಡಿ ಶ್ರೀನಿವಾಸಪುರ ಪೋಲಿಸರಿಗೆ ದೂರು ಸಲ್ಲಿಸಿದ್ದರು. ಶ್ರೀನಿವಾಸಪುರ ಪೊಲೀಸರು ಆರೋಪಿಗಳನ್ನ ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ವಿ.ಎಸ್.ರಮೇಶ್ ವಾದ ಮಂಡಿಸಿದ್ದರು. ಸತತ 8 ವರ್ಷ ವಿಚಾರಣೆ ನಡೆಸಿ 38 ಸಾಕ್ಷಿಗಳನ್ನ ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧೆಡೆ ಇನ್ನೂ ಕೆಲ ಪ್ರಕರಣಗಳು ದಾಖಲಾಗಿವೆ ಎಂಬುದು ಗೊತ್ತಾಗಿದೆ. ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.