ಕೋಲಾರ: ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರ ಬಸವನತ್ತ ಬಳಿ ಎಸ್‌ಡಿಸಿ ಕಾಲೇಜು ಮುಂಭಾಗ ಭಾನುವಾರ ಅಪಘಾತ ಸಂಭವಿಸಿ ಒಬ್ಬರು ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದಾರೆ.
ಕುಮಾರ್ (35) ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ಮೂಲದ ಶ್ರೀವತ್ಸ (23), ನಾಗೇಂದ್ರ (42), ಚಿತ್ಯಾ (9), ಸ್ಫೂರ್ತಿ (19), ಸುಕೃತ್ (23), ಸುಮಂತ್ (23) ಗಾಯಗೊಂಡಿದ್ದಾರೆ.
ಕ್ವಾಲಿಸ್ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ 7 ಜನರು ಪ್ರಯಾಣಿಸುತ್ತಿದ್ದರು. ಗಾಯಾಳು ಚಾಲಕನನ್ನು ಕಾರಿನಿಂದ ಹೊರ ತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಹರಸಾಹಸ ಪಟ್ಟರು. ಡಿಕ್ಕಿ ರಭಸಕ್ಕೆ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಗಳುಗಳು ಕೆಲಕಾಲ ಕಾರಿನಲ್ಲಿ ಸಿಲುಕಿ ನರಳಾಡಿದರು.
ಸ್ಥಳಕ್ಕೆ ಅಗ್ನಿಶಾಮಕ ಇಲಾಖೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮಂತರಾಯ ಸೇರಿದಂತೆ ಪೊಲೀಸ್ ಸಿಬ್ಬಂದಿ ಗಾಯಾಳುಗಳನ್ನು ಹೊರತೆಗೆದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.