
ಕೋಲಾರ: ಕೋಲಾರ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಗುರುವಾರ ಅಧಿಕಾರ ಸ್ವೀಕರಿಸಿದರು.
ಅಧಿಕಾರಿಗಳು, ಸಿಬ್ಬಂದಿ ಜೊತೆ ಸಮಾಲೋಚನೆ ನಡೆಸಿದ ಅವರು, ಕಚೇರಿ ಸುತ್ತಾಡಿ ಮಾಹಿತಿ ಪಡೆದರು. ಶುಕ್ರವಾರ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸುವ ಸಾಧ್ಯತೆ ಇದೆ.
ಶಿವಮೊಗ್ಗ ಜಿಲ್ಲೆಯ ಎಸ್‌ಪಿಯಾಗಿ ವರ್ಗಾವಣೆಗೊಂಡಿರುವ ಈ ಹಿಂದಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರು ಕನ್ನಿಕಾ ಅವರನ್ನು ಪ್ರವಾಸಿ ಮಂದಿರದಲ್ಲಿ ಭೇಟಿಯಾಗಿ ಶುಭಾಶಯ ಕೋರಿದರು. ಬಳಿಕ ಶಿವಮೊಗ್ಗಕ್ಕೆ ತೆರಳಿದರು.
ಕರ್ನಾಟಕ ಕೇಡರ್‌ನ 2018ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕನ್ನಿಕಾ ಈ ಮೊದಲು ಕಲಬುರಗಿ ಡಿಸಿಪಿಯಾಗಿ (ಕಾನೂನು ಹಾಗೂ ಸುವ್ಯವಸ್ಥೆ) ಕಾರ್ಯನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.