ಕೋಲಾರ: ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಏ.16ರಂದು ಬುಧವಾರದ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಕೆಜಿಎಫ್ ತಾಲ್ಲೂಕಿನ ಸಂಬಂಧಿಸಿದಂತೆ ಕೆಜಿಎಫ್ ರಾಬರ್ಟ್‍ಸನ್ ಪೇಟೆಯ ನಗರಸಭೆ ಸಭಾಂಗಣದಲ್ಲಿ ಜನ ಸಂಪರ್ಕ ಸಭೆ ಹಮ್ಮಿಕೊಂಡಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ವಿಳಂಬ, ನಿರ್ಲಕ್ಷ್ಯ ಅಥವಾ ಅಧಿಕಾರಿ, ಸಿಬ್ಬಂದಿ ದುರಾಡಳಿತದಲ್ಲಿ ತೊಡಗಿದ್ದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿ ಮೇಲೆ ಲಿಖಿತ ಅಹವಾಲು ಸ್ವೀಕರಿಸಲಾಗುವುದು. ಸಾರ್ವಜನಿಕರು ದೂರುಗಳಿದ್ದಲ್ಲಿ, ಈ ದಿನಾಂಕದಂದು ಲಿಖಿತ ದೂರುಗಳನ್ನು ದ್ವಿಪ್ರತಿಯಲ್ಲಿ ನೀಡಬಹುದು ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.