ಕೋಲಾರ: ಪ್ರಧಾನ ಮಂತ್ರಿ ಇಂಟರ್ನ್‍ಶಿಪ್ ಯೋಜನೆ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರದಿಂದ ಜಾರಿಗೊಳಿಸಿದ್ದು, ಮುಂದಿನ 5 ವರ್ಷಗಳಲ್ಲಿ ದೇಶದ ಪ್ರಖ್ಯಾತ 500ಕ್ಕೂ ಹೆಚ್ಚು ಉದ್ಯಮ/ಸಂಸ್ಥೆಗಳಲ್ಲಿ 1 ಕೋಟಿಗೂ ಹೆಚ್ಚಿನ ಅಭ್ಯರ್ಥಿಗಳಿಗೆ 12 ತಿಂಗಳ ಉದ್ಯೋಗಾಧಾರಿತ ಕೌಶಲವನ್ನು ನೀಡುವ ಯೋಜನೆಯಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು pminternship.mca.gov.in/login ವೆಬ್‍ಸೈಟ್‍ನಲ್ಲಿ ನೋಂದಾಯಿಸಬಹುದಾಗಿದ್ದು, ನೋಂದಣಿ ಏಪ್ರಿಲ್ 15ರ ವರೆಗೆ ವಿಸ್ತರಿಸಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಲು 21 ರಿಂದ 24 ರವರೆಗೆ ವಯೋಮಿತಿ ಹೊಂದಿದ ಎಸ್‍ಎಸ್‍ಎಲ್‍ಸಿ/ಪಿಯುಸಿ/ಐಟಿಐ/ಡಿಪ್ಲೋಮಾ/ಪದವಿ ವಿದ್ಯಾರ್ಹತೆ ಪೂರೈಸಿರುವ ನಿರುದ್ಯೋಗಿ ಯುವಕ/ಯುವತಿಯರು ಅರ್ಹರಾಗಿರುತ್ತಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 5000/- ವಿದ್ಯಾರ್ಥಿ ವೇತನವನ್ನು ನೀಡಲಾಗುವುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.