ಕೋಲಾರ: ಓದುಗ ಕೇಳುಗ ನಮ್ಮ ನಡೆ ಬಳಗ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಿರಿಗನ್ನಡ ಪುಸ್ತಕ ಮಳಿಗೆ ಆಶ್ರಯದಲ್ಲಿ ಓದುಗ ಕೇಳುಗ ನಮ್ಮ ನಡೆಯ 50ನೇ ತಿಂಗಳ ಸಾಹಿತ್ಯ ಸಂಭ್ರಮ-ಸಂವೇದನೆ ಸಂವಹನ ಕೃತಿ ಬಿಡುಗಡೆ ಸಮಾರಂಭ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ನಡೆಯಲಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೃತಿ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪಾ ಕೃತಿ ಕುರಿತು ಮಾತನಾಡಲಿದ್ದಾರೆ. ವಿಜ್ಞಾನ ಲೇಖಕ ಹಾಗೂ ಪರಿಸರ ಚಿಂತಕ ನಾಗೇಶ ಹೆಗಡೆ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ನಿವೃತ್ತ ಪ್ರಾಧ್ಯಾಪಕ ಹಾಗೂ ಕೃತಿಯ ಸಂಪಾದಕ ಎಂ.ಮುನಿರತ್ನಪ್ಪ ಭಾಗವಹಿಸುವರು.
‘ಎಲ್ಲರ ಸಹಕಾರ ಮತ್ತು ಬೆಂಬಲದಿಂದಾಗಿ ಓದುಗ-ಕೇಳುಗ ಕಾರ್ಯಕ್ರಮ 49 ತಿಂಗಳು ದಾಟಿ 50 ರ ಸಂಭ್ರಮದ ಹೊಸ್ತಿಲಲ್ಲಿದೆ. ಈವರೆಗೆ ಉಪನ್ಯಾಸ ನೀಡಿದವರ ಲೇಖನಗಳ ಮಾಲೆಯ ಪುಸ್ತಕವನ್ನು ಹೊರತರಲಾಗುತ್ತಿದೆ’ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.