ಬಂಗಾರಪೇಟೆ: ಸಮಾಜದಲ್ಲಿ ಎಲ್ಲರೂ ಶಾಂತಿ ಹಾಗೂ ಸಹಬಾಳ್ವೆಯಿಂದ ಬದುಕಬೇಕಾದರೆ ಬುದ್ಧನ ಮಾರ್ಗವನ್ನು ಅನುಸರಿಸಬೇಕು ಎಂದು ತಹಶೀಲ್ದಾರ್ ವೆಂಕಟೇಶಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಬುದ್ಧ ಜಯಂತಿಯಲ್ಲಿ ಬುದ್ಧನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮತ್ತೊಬ್ಬರನ್ನು ತುಳಿದು ಬದುಕುತ್ತಿದ್ದಾನೆ. ಸಮಾಜದಲ್ಲಿ ಸಮಾನತೆ ಇಲ್ಲ. ಇದಕ್ಕೆಲ್ಲಾ ಪರಿಹಾರ ದೊರಕಿ, ಸಮಾಜ ಶಾಂತವಾಗಿರಬೇಕಾದರೆ ಎಲ್ಲರೂ ಬುದ್ಧನ ತತ್ವ ಸಿದ್ದಾಂತಗಳನ್ನು ಪಾಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಬಿಇಒ ಗುರುಮೂರ್ತಿ, ಸಮಾಜ ಕಲ್ಯಾಣಾಧಿಕಾರಿ ಅಂಜಲಿದೇವಿ, ತೋಟಗಾರಿಕೆ ಅಧಿಕಾರಿ ಶಿವಾರೆಡ್ಡಿ, ದಲಿತ ಮುಖಂಡರಾದ ಸೂಲಿಕುಂಟೆ ಆನಂದ್, ರಮೇಶ್, ಹುಣಸನಹಳ್ಳಿ ವೆಂಕಟೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.