ಕೋಲಾರ: ವೇಮಗಲ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಅವರು ಕಾಂಗ್ರೆಸ್ ಸೇರಿದ ಬಿಜೆಪಿ–ಜೆಡಿಎಸ್ ಕಾರ್ಯಕರ್ತರ ಕೆನ್ನೆಗೆ ಮುತ್ತು ನೀಡಿ ಪಕ್ಷಕ್ಕೆ ಬರ ಮಾಡಿಕೊಂಡರು.
ವೇಮಗಲ್–ಕುರಗಲ್ ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ, ಜೆಡಿಎಸ್ ತೊರೆದ ಕೆಲವು ಸ್ಥಳೀಯ ಮುಖಂಡರು ಕಾಂಗ್ರೆಸ್ ಸೇರಿದರು. ಶಾಲು, ಹೂವಿನ ಹಾರ ಹಾಕಿ ಪಕ್ಷಕ್ಕೆ ಬರಮಾಡಿಕೊಂಡ ಶಾಸಕ ಕೊತ್ತೂರು ಅವರನ್ನು ತಬ್ಬಿ, ಕೆನ್ನೆಗೆ ಮುತ್ತು ನೀಡಿದರು. ಸುತ್ತ ಇದ್ದವರು ಚಪ್ಪಾಳೆ ಹೊಡೆದರು. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
‘ನಮಗೆ ಜನರ ಮೇಲೆ ಪ್ರೀತಿ ಹೆಚ್ಚು. ಪ್ರೀತಿಯಿಂದ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ. ನೀವೂ ಪ್ರೀತಿಯಿಂದ ಪಕ್ಷ ಸೇರುತ್ತಿದ್ದೀರಿ’ ಎಂದು ಶಾಸಕ ಹೇಳಿದ್ದಾರೆ. ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.