ಜೈಲು (ಪ್ರಾತಿನಿಧಿಕ ಚಿತ್ರ)
ಕೋಲಾರ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಚಾಕಾರಸನಹಳ್ಳಿ ಗ್ರಾಮದ ಮುನಿಶಾಮಪ್ಪ (61) ಎಂಬಾತನಿಗೆ ಕೋಲಾರ ಪೋಕ್ಸೊ ವಿಶೇಷ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ 2024ರ ಫೆಬ್ರುವರಿ 14ರಂದು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಮಹಿಳಾ ಪೊಲೀಸ್ ಠಾಣಾಧಿಕಾರಿಯು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಬಿ.ಪ್ರಸಾದ್ ಅವರು ಅಪರಾಧಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದ್ದಾರೆ. ನೊಂದ ಬಾಲಕಿಗೆ ಸರ್ಕಾರದಿಂದ ₹ 1 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ಲಲಿತಕುಮಾರಿ ವಾದ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.