ಕೊಲಾರ: ನಗರದಲ್ಲಿ 2001ರಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 24 ವರ್ಷಗಳ ನಂತರ ಕೋಲಾರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೋಲಾರದ ಶಾಹೀದ್ ನಗರದ ರೈಲ್ವೆಯ ಹಳಿ ಹತ್ತಿರದ ನಿವಾಸಿ ಮಹಮದ್ ಹನಿಫ್ (48) ಬಂಧಿತ ಆರೋಪಿ.
ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಡಿವೈಎಸ್ಪಿ ಎಂ.ಎಚ್.ನಾಗ್ತೆ ಮಾರ್ಗದರ್ಶನದಲ್ಲಿ ಕೋಲಾರ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸದಾನಂದ ಮತ್ತು ಶೇಖರ್, ರಮೇಶ್, ಫಾರುಕ್ ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು.
ಆರೋಪಿಯು ಬೆಂಗಳೂರಿನಲ್ಲಿ ವಾಸವಾಗಿರುವ ಬಗ್ಗೆ ಮಾಹಿತಿದಾರರ ಸಹಕಾರದೊಂದಿಗೆ ಖಚಿತ ಮಾಹಿತಿ ಕಲೆಹಾಕಿ ಬಂಧಿಸಿದ್ದಾರೆ. ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಿಬ್ಬಂದಿ ಕಾರ್ಯವನ್ನು ಎಸ್‌ಪಿ ಶ್ಲಾಘಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.