ಕೋಲಾರ: ತಾಲ್ಲೂಕಿನ ಶ್ರೀನಿವಾಸಪುರ ರಸ್ತೆಯಲ್ಲಿರುವ ವೀರಾಪುರ ಗೇಟ್ ಬಳಿ ಇರುವ ಮಹರ್ಷಿ ಶಾಲೆ ಮುಂದೆ ಸೋಮವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಅಣ್ಣ ಹಾಗೂ ತಂಗಿ
ಮೃತಪಟ್ಟಿದ್ದಾರೆ.
ಕೋಲಾರ ತಾಲ್ಲೂಕಿನ ಕೊಂಡೇನಹಳ್ಳಿ ನಿವಾಸಿಗಳಾದ ಹರ್ಷಿತ್ ಸಿಂಗ್ (20) ಹಾಗೂ ಯಶಸ್ವಿನಿ ಬಾಯಿ (16) ಮೃತ ಸಹೋದರ, ಸಹೋದರಿ ಎಂದು ಗುರುತಿಸಲಾಗಿದೆ.
ಹರ್ಷಿತ್, ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ತರಗತಿ ಮುಗಿಸಿಕೊಂಡು ತಂಗಿ ಯಶಸ್ವಿನಿ ಅವರನ್ನು ಬಾಲಕಿಯರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿ ಮಾಡಿದ್ದರು.
ನಂತರ ಇಬ್ಬರೂ ಮನೆಗೆ ವಾಪಸ್ ತೆರಳುವ ವೇಳೆ ಇವರಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದಿದೆ ಎಂಬುದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.