
ಕೋಲಾರದಲ್ಲಿ ಈಚೆಗೆ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕುಮಟ್ಟದ ಕ್ರೀಡಾಕೂಟಕ್ಕೆ ಸಂಸದ ಎಂ.ಮಲ್ಲೇಶ್ ಬಾಬು ಚಾಲನೆ ನೀಡಿದರು
ಕೋಲಾರ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಾಲಾ ಶಿಕ್ಷಣ ಹಾಗೂ ಆರ್.ವಿ.ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಬಾಲಕ, ಬಾಲಕಿಯರ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಸಂಸದ ಎಂ.ಮಲ್ಲೇಶ್ ಬಾಬು ಚಾಲನೆ ನೀಡಿದರು.
ಬಳಿಕ ಕ್ರೀಡಾ ಧ್ವಜಾರೋಹಣ ಮಾಡಿದರು. ವಿವಿಧ ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದಾರೆ.
ಮಲ್ಲೇಶ್ ಬಾಬು ಮಾತನಾಡಿ, ‘ಶಾಲಾ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಎಷ್ಟು ಒತ್ತು ನೀಡಿ ಪರೀಕ್ಷೆ ಬರೆಯುತ್ತಾರೋ ಅದೇ ರೀತಿ ಕ್ರೀಡೆಗೂ ಹೆಚ್ಚಿನ ಪ್ರಾಮುಖ್ಯ ನೀಡಬೇಕು. ಪೋಷಕರು ಮಕ್ಕಳಿಗೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಕೆಲಸವನ್ನು ಮಾಡಬೇಕು’ ಎಂದರು.
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ತಮ್ಮ ದೇಹವನ್ನು ಬಲಪಡಿಸಿಕೊಳ್ಳಬಹುದು ಮತ್ತು ಆರೋಗ್ಯವಂತರಾಗಿರಬಹುದು. ಎಲ್ಲಾ ಒತ್ತಡಗಳನ್ನು ಬದಿಗಿಟ್ಟು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.
ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಪನಿರ್ದೇಶಕಿ ಮಂಜುಳಾ ಮಾತನಾಡಿ, ಮೂವತ್ತಕ್ಕೂ ಹೆಚ್ಚಿನ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ ಎಂದರು.
ಪ್ರಾಂಶುಪಾಲರಾದ ವೇದಾಶೇಖರ್ ಮಾತನಾಡಿದರು. ತಾಲ್ಲೂಕು ಮಟ್ಟದ ವಿವಿಧ ಕ್ರೀಡೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಗಣ್ಯರು ಬಹುಮಾನ ವಿತರಿಸಿದರು. ಇದಕ್ಕೂ ಮುನ್ನ ಕ್ರೀಡಾಪಟು ಪ್ರಜ್ವಲ್ ಅವರಿಂದ ಮಲ್ಲೇಶ್ ಬಾಬು ಕ್ರೀಡಾಜ್ಯೋತಿ ಸ್ವೀಕರಿಸಿದರು. ಕ್ರೀಡಾ ತಂಡಗಳು ಪಥ ಸಂಚಲನ ನಡೆಸಿದವು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಆರ್.ಗೀತಾ, ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕೋಲಾರ ಜಿಲ್ಲಾ ಅಧ್ಯಕ್ಷ ಬಿ.ಎನ್.ಮುರಳಿ, ಉಪನ್ಯಾಸಕರ ಸಂಘದ ಅಧ್ಯಕ್ಷ ನಟರಾಜ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಂದ್ರಶೇಖರ್, ತಾಲ್ಲೂಕು
ದೈಹಿಕ ಶಿಕ್ಷಣ ಅಧಿಕಾರಿ ಎಸ್.ಚೌಡಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಮುರಳಿ ಮೋಹನ್, ತಾಲ್ಲೂಕು ಅಧ್ಯಕ್ಷ ಆರ್.ನಾಗರಾಜ್, ಆರ್.ವಿ.ಪದವಿಪೂರ್ವ ಕಾಲೇಜು ಕಾರ್ಯದರ್ಶಿ ಪಿ.ಆರ್.ಸೋಮಶೇಖರ್, ಕ್ರೀಡಾಪಟುಗಳು ಹಾಗೂ ತೀರ್ಪುಗಾರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.