ಕೋಲಾರ: ತಾಲ್ಲೂಕಿನ ತೊರದೇವಂಡಹಳ್ಳಿ ಗ್ರಾಮದಲ್ಲಿನ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಬೀಗ ಮುರಿದು ದೇವರ ಒಡವೆಗಳನ್ನು ಕಳುವು ಮಾಡಲಾಗಿದ್ದು, ಈ ಸಂಬಂಧ ಗ್ರಾಮಸ್ಥರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಚೌಡೇಶ್ವರಿ ದೇವಾಲಯದ ಮುಖ್ಯದ್ವಾರ ಮತ್ತು ಗರ್ಭಗುಡಿ ಬಾಗಿಲುಗಳ ಚಿಲಕ ಕಿತ್ತು, ಬೀಗ ಒಡೆದು ದೇವರ 1 ದೊಡ್ಡ ಮಾಂಗಲ್ಯ, 5 ಸಣ್ಣ ಮಾಂಗಲ್ಯ ಸೇರಿದಂತೆ ಇನ್ನಿತರೆ ಒಡವೆ ಕಳುವು ಮಾಡಲಾಗಿದೆ.
ದೇವಾಲಯದ ಪ್ರಧಾನ ಅರ್ಚಕ ಸತೀಶ್ ಬೆಳಿಗ್ಗೆ ಪೂಜೆ ಸಲ್ಲಿಸಲು ತೆರಳಿದಾಗ ಕಳುವು ಆಗಿರುವುದು ಗೊತ್ತಾಗಿದೆ. ನಂತರ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. 112 ಗೆ ಕರೆ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಗ್ರಾಮಾಂತರ ಠಾಣೆ ಪೊಲೀಸರು ಮಹಜರು ನಡೆಸಿ ಕ್ರಮಕೈಗೊಳ್ಳಬೇಕೆಂದು ಅರ್ಚಕ ಸತೀಶ್, ಗ್ರಾಮಸ್ಥರಾದ ರಾಮಚಂದ್ರಪ್ಪ, ರಾಜಪ್ಪ, ಲಕ್ಷ್ಮಿನಾರಾಯಣಗೌಡ ದೂರಿನಲ್ಲಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.