ADVERTISEMENT

20ಕ್ಕೆ ಹವಾಮಾನ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 16 ಮೇ 2025, 16:20 IST
Last Updated 16 ಮೇ 2025, 16:20 IST

ಕೋಲಾರ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಹೊನ್ನಶೆಟ್ಟಿಹಳ್ಳಿಯ ಗ್ರಾಮ ವಿಕಾಸ ಹಾಗೂ ಭಾರತೀಯ ಹವಾಮಾನ ಇಲಾಖೆ ಸಹಭಾಗಿತ್ವದಲ್ಲಿ ಬಿಸಿ, ಶೀತಗಾಳಿ ಮತ್ತು ಹವಾಮಾನ ವೈಪರೀತ್ಯ ಕುರಿತು ಮಾಧ್ಯಮ ಕಾರ್ಯಾಗಾರವನ್ನು ಮೇ 20ರಂದು ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಿದೆ.

ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದ ಪ್ರಸಂಗಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಅದರ ಕಾರಣ, ಆಗುಹೋಗುಗಳು ಹಾಗೂ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಂವಹನ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಇದಾಗಿದೆ.

ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಕಾರ್ಯಾಗಾರದಲ್ಲಿ ಭಾರತೀಯ ಹವಾಮಾನ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಪತ್ರಕರ್ತರು ಮೇ 17ರ ಸಂಜೆ 4 ಗಂಟೆಯೊಳಗೆ ಪತ್ರಕರ್ತರ ಭವನದ ಗಂಗಾಧರ್, ಮೊ: 9110830279 ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್‌ಕುಮಾರ್ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.