ADVERTISEMENT

ಕೋಲಾರ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆ ಕೊಲೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 2:54 IST
Last Updated 9 ಅಕ್ಟೋಬರ್ 2025, 2:54 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಕೋಲಾರ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ–75ರ ಚಲುವನಹಳ್ಳಿ ಬಳಿ ಬುಧವಾರ ಬೆಳಿಗ್ಗೆ ಮಹಿಳೆಯೊಬ್ಬರ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ತಾಲ್ಲೂಕಿನ ಬೆಳ್ಳೂರು ಗ್ರಾಮದ ಮಾಲಾ (40) ಕೊಲೆಯಾದ ಮಹಿಳೆ. ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ.

ADVERTISEMENT

ಬೆಳಿಗ್ಗೆ 6 ಗಂಟೆ ಸುಮಾರಿಗೆ ಆಂಧ್ರಪ್ರದೇಶದ ಬಾಯಿಕೊಂಡಕ್ಕೆ ಹೋಗುತ್ತಿರುವುದಾಗಿ ಹೇಳಿ ಮಹಿಳೆ ಮನೆಯಿಂದ ತೆರಳಿದ್ದಾರೆ. ನಂತರ ಚಲುವನಹಳ್ಳಿ ಬಳಿ ಶವವಾಗಿ ಪತ್ತೆಯಾಗಿದ್ದಾರೆ.

ಸಾವಿನ ಸಂಬಂಧ ಆರಂಭದಲ್ಲಿ ಸಾಕಷ್ಟು ಅನುಮಾನಗಳು ವ್ಯಕ್ತವಾದವು. ಯಾವುದೋ ವಾಹನ ಡಿಕ್ಕಿ ಹೊಡೆದು ಹೋಗಿರಬಹುದು ಎಂಬ ಚರ್ಚೆಗಳು ನಡೆದವು. ನಂತರ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹೆದ್ದಾರಿ ಬಳಿ ಮಹಿಳೆಯ ದೇಹಕ್ಕೆ ಆಗಿರುವ ಗಾಯ ಕಂಡು, ಇದೊಂದು ಕೊಲೆ ಎಂಬ ಶಂಕೆ ವ್ಯಕ್ತಪಡಿಸಿದರು.

ಸ್ಥಳದಲ್ಲಿದ್ದ ಕಲ್ಲು, ಗಾಯ ಆಧರಿಸಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವುದು ಗೊತ್ತಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಿಂದಲೂ ಕೊಲೆ ಎಂಬುದು ತಿಳಿದು ಬಂದಿದೆ.

ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಮಹಿಳೆಯು ವಿಧವೆಯಾಗಿದ್ದು, ಸ್ನೇಹಿತ ಕೊಲೆ ಮಾಡಿರುವ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಸದ್ಯ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.