ಮಾಲೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗಡಿ, ಕಚೇರಿಗಳ ನಾಮ ಫಲಕಗಳಲ್ಲಿ ಶೇ 60ರಷ್ಟು ಕಡ್ಡಾಯವಾಗಿ ಕನ್ನಡ ಅಕ್ಷರಗಳನ್ನು ಬಳಸುವಂತೆ ಆದೇಶಿಸಿ ಕಾರ್ಯರೂಪಕ್ಕೆ ತರುವಂತೆ ಒತ್ತಾಯಿಸಿ ಕರ್ನಾಟಕ ಪ್ರಜಾ ವೇದಿಕೆ ಸಂಘಟನೆ ಗುರುವಾರ ಪ್ರತಿಘಟನೆ ನಡೆಸಿತು.
ಸಂಘನೆಯ ರಾಜ್ಯಾಧ್ಯಕ್ಷ ಜಿ. ಮಂಜುನಾಥ ಗೌಡ ನೇತೃತ್ವದಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಜಿ.ಮಂಜುನಾಥ ಗೌಡ ಮಾತನಾಡಿ, ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವವರನ್ನು ಕನ್ನಡಿಗರೇ ಎಂದು ಭಾವಿಸಿದ್ದೇವೆ. ಕನ್ನಡ ನೆಲದಲ್ಲಿ ಕನ್ನಡ ಭಾಷೆಗೆ ಮೊದಲ ಪ್ರಾಶ್ಯಸ್ತ. ಅನ್ನ ಕೊಡುವ ಈ ನೆಲದ ನಿಯಮವನ್ನು ಎಲ್ಲರೂ ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಆದ್ದರಿಂದ ಕನ್ನಡವನ್ನು ಉಳಿಸಿ ಬೆಳೆಸುವ ಸಲುವಾಗಿ ತಾಲ್ಲೂಕು ಆಡಳಿತ ಎಲ್ಲಾ ನಾಮ ಫಲಕಗಳಲ್ಲಿ ಶೇ 60ರಷ್ಟು ಕನ್ನಡ ಅಕ್ಷರಗಳನ್ನು ಕಡ್ಡಾಯವಾಗಿ ಬಳಸುವಂತೆ ಆದೇಶಿಸಿ, ಕಾರ್ಯರೂಪಕ್ಕೆ ತರಬೇಕು ಎಂದು ಒತ್ತಾಯಿಸಿದರು.
ನಂತರ ಗ್ರೇಡ್ 2 ತಹಶೀಲ್ದಾರ್ ಹರಿಪ್ರಸಾದ್ ಮತ್ತು ಸರ್ಕಲ್ ಇನ್‌ಸ್ಪೆಕ್ಟರ್ ವಸಂತ್ ಅವರಿಗೆ ಮನವಿ ಸಲ್ಲಿಸಿದರು. ಪ್ರಜಾವೇದಿಕೆ ತಾಲ್ಲೂಕು ಅಧ್ಯಕ್ಷ ಪ್ರಸನ್ನಕುಮಾರ್, ಶಿವಾನಂದ, ವೆಂಕಟೇಶ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.