ಬೇತಮಂಗಲ: ಕಮ್ಮಸಂದ್ರ ಗ್ರಾಮದ ಕೋಟಿಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಭಾನುವಾರ ವಿವಿಧ ಪೂಜೆ ಕಾರ್ಯಗಳು ನಡೆದವು.
ಸ್ವಾಮಿಯನ್ನು ವಿವಿಧ ಹೂಗಳಿಂದ ಅಲಂಕರಿಸಲಾಗಿತ್ತು. ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ಪೂಜೆ ನಡೆಯಿತು. ಸಾಂಬಶಿವ ಮೂರ್ತಿ ಸ್ವಾಮಿ ಮುಕ್ತಿ ಮಂದಿರದಲ್ಲಿ ಅನೇಕ ಸಾಧುಸಂತರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.
ಗುರು ಪೂರ್ಣಿಮೆ ಅಂಗವಾಗಿ ರಾಜ್ಯ, ಹೊರ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.