ADVERTISEMENT

ಕೋಲಾರ | ಪೊಲೀಸ್‌ ಇಲಾಖೆ ಜನಸ್ನೇಹಿಯಾಗಿರಲಿ: ಶಾಸಕ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2023, 14:10 IST
Last Updated 22 ನವೆಂಬರ್ 2023, 14:10 IST
ಕೋಲಾರದಲ್ಲಿ ಶಾಸಕ ಕೊತ್ತೂರು ಮಂಜುನಾಥ್‌, ಪೊಲೀಸ್‌ ಇಲಾಖೆಗೆ ವಾಹನ ಹಸ್ತಾಂತರಿಸಿದರು. ಅಕ್ರಂ ಪಾಷ, ಎಂ.ನಾರಾಯಣ, ನಂದಿನಿ ಪ್ರವೀಣ್‌, ಮೈಲಾಂಡಹಳ್ಳಿ ಮುರಳಿ ಇದ್ದಾರೆ
ಕೋಲಾರದಲ್ಲಿ ಶಾಸಕ ಕೊತ್ತೂರು ಮಂಜುನಾಥ್‌, ಪೊಲೀಸ್‌ ಇಲಾಖೆಗೆ ವಾಹನ ಹಸ್ತಾಂತರಿಸಿದರು. ಅಕ್ರಂ ಪಾಷ, ಎಂ.ನಾರಾಯಣ, ನಂದಿನಿ ಪ್ರವೀಣ್‌, ಮೈಲಾಂಡಹಳ್ಳಿ ಮುರಳಿ ಇದ್ದಾರೆ   

ಕೋಲಾರ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪೊಲೀಸ್‌ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವಂತೆ ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿ ಮುಂದೆ ತಮ್ಮ ಅನುದಾನದಲ್ಲಿ ಎರಡು ನಾಲ್ಕು ಚಕ್ರದ ವಾಹನಗಳನ್ನು ಪೊಲೀಸ್‌ ಇಲಾಖೆಗೆ ಹಸ್ತಾಂತರಿಸಿ ಮಾತನಾಡಿದರು.

‘ಪೊಲೀಸ್‌ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯು ನಿರಂತರವಾಗಿ ಜನರ ಮಧ್ಯೆ ಕೆಲಸ ಮಾಡುತ್ತಿದ್ದು, ಅವರಿಗೆ ಅವಶ್ಯಕ್ಕೆ ಸ್ಪಂದಿಸುವುದು ಕೂಡ ಜನಪ್ರತಿನಿಧಿಗಳ ಜವಾಬ್ದಾರಿ’ ಎಂದರು.

ADVERTISEMENT

‘ಆರು ದ್ವಿಚಕ್ರ ವಾಹನ ನೀಡಲಾಗುತ್ತಿದ್ದು ಅವಶ್ಯವಿದ್ದರೆ ಮತ್ತಷ್ಟು ನಾಲ್ಕು ಚಕ್ರದ ಹಾಗೂ ದ್ವಿಚಕ್ರ ವಾಹನ ನೀಡಲಾಗುವುದು. ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ಜನರಲ್ಲಿನ ಭಯದ ವಾತಾವರಣವನ್ನು ದೂರ ಮಾಡಬೇಕಾಗಿದೆ’ ಎಂದರು.

ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಂ.ನಾರಾಯಣ, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ವಕ್ಕಲೇರಿ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.