
ಪ್ರಜಾವಾಣಿ ವಾರ್ತೆಬೇತಮಂಗಲ: ಸಮೀಪದ ಕಮ್ಮಸಂದ್ರದಲ್ಲಿನ ಕೋಟಿ ಲಿಂಗೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ಕಡೆ ಸೋಮವಾರದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.
ದೇವಾಲಯವನ್ನು ವಿವಿಧ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಬೆಳಗ್ಗೆಯಿಂದ ರಾತ್ರಿಯವರೆಗೂ ಭಕ್ತಾಧಿಗಳು ದೇವಾಲಯಕ್ಕೆ ಆಗಮಿಸಿ ಸ್ವಾಮಿಯ ದರ್ಶನ ಪಡೆದರು. ಜೊತೆಗೆ ಲಿಂಗಗಳ ಮುಂದೆ ದೀಪ ಹಚ್ಚಿ ತಮ್ಮ ಹರಿಕೆ ಹಾಗೂ ಕೋರಿಕೆ ಸಲ್ಲಿಸಿದರು.
ಕೋಟಿಲಿಂಗೇಶ್ವರ ದೇವಾಲಯದ ಆಡಳಿತಾಧಿಕಾರಿ ಕೆ.ವಿ.ಕುಮಾರಿ ಅವರ ನೇತೃತ್ವದಲ್ಲಿ ದೀಪ ಬೆಳಗಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.