(ಸಾಂದರ್ಭಿಕ ಚಿತ್ರ)
ಗೆಟ್ಟಿ ಚಿತ್ರ
ಮುಳಬಾಗಿಲು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಬಾಳಸಂದ್ರ ಗ್ರಾಮದ ಶಾಮೇಗೌಡ (34) ಮೃತರು. ಶಾಮೇಗೌಡ ಬುಧವಾರ ಬೆಳಗ್ಗೆ ಎಂದಿನಂತೆ ತಮ್ಮ ತೋಟಕ್ಕೆ ಹೋಗಿ ವಾಪಸ್ ಮನೆಗೆ ಹೋಗುವಾಗ ಮುಳಬಾಗಿಲು ಕಡೆಯಿಂದ ಬಾಳಸಂದ್ರಕ್ಕೆ ಹೋಗುತ್ತಿದ್ದ ಬಸ್ ಹಿಂಬಂದಿಯಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ ಗುದ್ದಿದ ರಭಸಕ್ಕೆ ಮೃತ ದೇಹವು ಬಸ್ ಅಡಿಯಲ್ಲಿ ಸಿಲುಕಿದ್ದು, ಸುಮಾರು 20 ರಿಂದ 30 ಮೀಟರ್ ಎಳೆದುಕೊಂಡು ಹೋಗಿದ್ದು ರಸ್ತೆಯುದ್ದಕ್ಕೂ ರಕ್ತ ಚೆಲ್ಲಿದೆ.
ಕೆಎಸ್ಆರ್‌ಟಿಸಿ ಜಿಲ್ಲಾಧಿಕಾರಿ ಎನ್. ಶ್ರೀನಾಥ್, ವಿಭಾಗೀಯ ಭದ್ರತಾ ಅಧಿಕಾರಿ ಚಂದ್ರೇಗೌಡ, ತಾಂತ್ರಿಕ ಅಧಿಕಾರಿ ಶಾಂತ ಕುಮಾರ್, ಘಟಕ ವ್ಯವಸ್ಥಾಪಕ ಅನ್ಸರ್ ಪಾಷಾ, ಕಾನೂನು ಅಧಿಕಾರಿ ಮಂಜುನಾಥ್ ಮತ್ತಿತರರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಬಸ್ ಚಾಲಕ ವಿಶ್ವನಾಥ ಎಂಬುವವರನ್ನು ಮುಳಬಾಗಿಲು ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.