ADVERTISEMENT

ಕೋಲಾರ | ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ನೌಕರ ಸಾವು

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 5:20 IST
Last Updated 15 ಜುಲೈ 2025, 5:20 IST
ಹೃದಯಾಘಾತ (ಕಾಲ್ಪನಿಕ ಚಿತ್ರ)
ಹೃದಯಾಘಾತ (ಕಾಲ್ಪನಿಕ ಚಿತ್ರ)   

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಕರ ಬಾಬಾಜಾನ್‌ (53) ಹೃದಯಾಘಾತದಿಂದ ಸೋಮವಾರ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮುತ್ತಕಪಲ್ಲಿ ಗ್ರಾಮದ ಅವರು ಸದ್ಯ ಡಿಪೊದಲ್ಲಿ ಮೆಕ್ಯಾನಿಕ್‌ ಆಗಿ ಕೆಲಸ ಮಾಡುತ್ತಿದ್ದರು. ಚಾಲಕರಾಗಿ ಕೆಲಸಕ್ಕೆ ಸೇರಿದ್ದ ಅವರು ಅಪಘಾತದಲ್ಲಿ ಕಾಲಿಗೆ ಪೆಟ್ಟಾದ ಕಾರಣ ಘಟಕದಲ್ಲಿ ಕೆಲಸ ಮಾಡುತ್ತಿದ್ದರು. ಬಸ್ಸುಗಳಿಗೆ ಡೀಸೆಲ್‌ ಭರ್ತಿ ಮಾಡುವ ಕೆಲಸದಲ್ಲಿ ತೊಡಗಿದ್ದರು. ಭಾನುವಾರ ಕೂಡ ಕರ್ತವ್ಯ ನಿಭಾಯಿಸಿ ಮನೆಗೆ ತೆರಳಿದ್ದರು.

ಅವರ ನಿವಾಸಕ್ಕೆ ಕೆಎಸ್‌ಆರ್‌ಟಿಎಸ್‌ ಕಾರ್ಮಿಕ ಕಲ್ಯಾಣಾಧಿಕಾರಿ ನಾಗರಾಜ್‌, ಘಟಕ ವ್ಯವಸ್ಥಾಪಕ ವೆಂಕಟೇಶ್‌ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ನೀಡಿದರು. ಕಾರ್ಮಿಕ ಕಲ್ಯಾಣ ನಿಧಿಯನ್ನು ಹಸ್ತಾಂತರಿಸಿದರು.

ADVERTISEMENT

ಕುಟುಂಬದವರಿಗೆ ಅನುಕಂಪ ಆಧಾರದ ನೌಕರಿ ನೀಡುವ ಸಂಬಂಧ ಪರಿಶೀಲಿಸಿ, ಮೇಲಧಿಕಾರಿಗಳ ಜೊತೆ ಚರ್ಚಿಸುವುದಾಗಿ ಕೆಎಸ್‌ಆರ್‌ಟಿಸಿ ಕೋಲಾರ ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಾಥ್‌ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.