ADVERTISEMENT

ಶ್ರೀನಿವಾಸಪುರ: ಕಾನೂನು ಅರಿವು ನೆರವು ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 4:59 IST
Last Updated 1 ಜೂನ್ 2022, 4:59 IST
ಶ್ರೀನಿವಾಸಪುರದ ಸಾಯಿವಿಜಯ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಸಮಾರಂಭವನ್ನು ಜೆಎಂಎಫ್‌ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ. ಮನು ಉದ್ಘಾಟಿಸಿದರು
ಶ್ರೀನಿವಾಸಪುರದ ಸಾಯಿವಿಜಯ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಸಮಾರಂಭವನ್ನು ಜೆಎಂಎಫ್‌ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ. ಮನು ಉದ್ಘಾಟಿಸಿದರು   

ಶ್ರೀನಿವಾಸಪುರ: ‘ಯುವ ಸಮುದಾಯ ಅನಾರೋಗ್ಯಕ್ಕೆ ಕಾರಣವಾಗುವ ತಂಬಾಕು ಪದಾರ್ಥ ಸೇವನೆಯಿಂದ ದೂರವಿರಬೇಕು. ಉತ್ತಮ ಹವ್ಯಾಸಗಳನ್ನು ಮೈಗೂಡಿಸಿಕೊಂಡು ಸ್ವಸ್ಥ ಸಮಾಜ ನಿರ್ಮಾಣ ಮಾಡಬೇಕು’ ಎಂದು ಜೆಎಂಎಫ್‌ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ಕೆ. ಮನು ಹೇಳಿದರು.

ಪಟ್ಟಣದ ಸಾಯಿವಿಜಯ ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಮತ್ತಿತರ ಇಲಾಖೆಯಿಂದ ಮಂಗಳವಾರ ಏರ್ಪಡಿಸಿದ್ದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ತಿಳಿಸುವುದು ಹಾಗೂ ಜಾಗೃತಿ ಮೂಡಿಸುವುದು ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ADVERTISEMENT

ಸರ್ಕಲ್ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ ಮಾತನಾಡಿ, ಪೋಷಕರು ತಂಬಾಕು ಪದಾರ್ಥಗಳನ್ನು ಮಕ್ಕಳಿಂದ ತರಿಸಿಕೊಳ್ಳಬಾರದು. ಹಾಗೆ ಮಾಡುವುದರಿಂದ ಮಕ್ಕಳು ತಂಬಾಕು ವ್ಯಸನಿಗಳಾಗುವ ಅಪಾಯವಿದೆ. ಆರೋಗ್ಯ ರಕ್ಷಣೆ ಎಲ್ಲರ ಹೊಣೆ. ಮಕ್ಕಳ ಚಲನವಲನದ ಬಗ್ಗೆ ಪೋಷಕರು ನಿಗಾವಹಿಸಬೇಕು ಎಂದು ಹೇಳಿದರು.

ತಂಬಾಕು ಸೇವನೆಯ ದುಷ್ಪರಿಣಾಮ ಕುರಿತು ಆಂಜಾಲಮ್ಮ, ತಂಬಾಕು ಸೇವನೆ ನಿವಾರಣೋಪಾಯದ ಬಗ್ಗೆ ಸರ್ಕಲ್ ಇನ್‌ಸ್ಪೆಕ್ಟರ್ ನಾರಾಯಣಸ್ವಾಮಿ, ತಂಬಾಕು ಸೇವನೆ ನಿಷೇಧ ಕಾಯ್ದೆ ಕುರಿತು ವಕೀಲ ಶ್ರೀನಿವಾಸಗೌಡ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಯಿತು.

ಜೆಎಂಎಫ್‌ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಎಚ್.ಆರ್. ಸಚಿನ್, ಸಹಾಯಕ ಸರ್ಕಾರಿ ಅಭಿಯೋಜಕ ಮುಕುಂದ, ತಾಲ್ಲೂಕು ಆರೋಗ್ಯಾಧಿಕಾರಿ ಎಂ.ಸಿ. ವಿಜಯ, ಪ್ರಾಂಶುಪಾಲ ಕೆ.ಎನ್. ರಾಮಾಂಜನೇಯ, ವಕೀಲರಾದ ರಾಜಗೋಪಾಲ ರೆಡ್ಡಿ, ಟಿ. ವೆಂಕಟೇಶ್, ವಿ. ಅರ್ಜುನ್, ಎನ್.ವಿ. ಜಯರಾಮೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.