ADVERTISEMENT

ಗಾಳಿಯಲ್ಲಿ ಗುಂಡು ಹಾರಿಸಿದ ಶಾಸಕ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2021, 19:30 IST
Last Updated 15 ಅಕ್ಟೋಬರ್ 2021, 19:30 IST
ಮಾಲೂರು ತಾಲ್ಲೂಕಿನ ಕೊಮ್ಮನಹಳ್ಳಿಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ. ನಂಜೇಗೌಡ ಬಂದೂಕಿನಿಂದ ಗುಂಡು ಹಾರಿಸುತ್ತಿರುವುದು
ಮಾಲೂರು ತಾಲ್ಲೂಕಿನ ಕೊಮ್ಮನಹಳ್ಳಿಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ. ನಂಜೇಗೌಡ ಬಂದೂಕಿನಿಂದ ಗುಂಡು ಹಾರಿಸುತ್ತಿರುವುದು   

ಮಾಲೂರು: ವಿಜಯದಶಮಿ ಅಂಗವಾಗಿ ಆಯುಧಗಳಿಗೆ ಪೂಜೆ ಸಲ್ಲಿಸಿದ ಬಳಿಕ ಶಾಸಕ ಕೆ.ವೈ.ನಂಜೇಗೌಡ ನಾಡ ಬಂದೂ
ಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ತಾಲ್ಲೂಕಿನ ಕೊಮ್ಮನಹಳ್ಳಿಯಲ್ಲಿ ಶುಕ್ರವಾರ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮೊದಲು ಬನ್ನಿಮರ, ಶಸ್ತ್ರಾಸ್ತ್ರಗಳಿಗೆ ಅವರು ಪೂಜೆ ಸಲ್ಲಿಸಿದರು. ಬಳಿಕ ನಾಡ ಬಂದೂಕಿನಿಂದ ಗಾಳಿಯಲ್ಲಿ 4 ಸುತ್ತು ಗುಂಡು ಹಾರಿಸಿದರು. ಈ ಬಗ್ಗೆ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಶಾಸಕ ನಂಜೇಗೌಡ ಅವರ ಸಹೋದರ ಈರೇಗೌಡ ಅವರ ಹೆಸರಿನಲ್ಲಿ ಬಂದೂಕು ಪರವಾನಗಿ ಇದೆ. ಪರವಾನಗಿ ಪಡೆದವರು ಬಳಸಬೇಕಿದ್ದ ಬಂದೂಕನ್ನು ಶಾಸಕರು ಬಳಸಿದ್ದಾರೆ. ಜೊತೆಗೆ, ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸುವುದು ಅಪರಾಧ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.