ಸರ್ವೆ ಇಲಾಖೆ ಅಧಿಕಾರಿ ಸುರೇಶ್ ಬಾಬು ಹಾಗೂ ಲೋಕಾಯುಕ್ತ ಕಚೇರಿ
ಕೋಲಾರ: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಆರೋಪದ ಮೇಲೆ ಕೋಲಾರ ಸರ್ವೆ ಇಲಾಖೆ ಸೂಪರ್‌ವೈಸರ್ ಸುರೇಶ್ ಬಾಬು ಅವರಿಗೆ ಸಂಬಂಧಿಸಿದ ಏಳು ಕಡೆ ಲೋಕಾಯುಕ್ತ ಪೊಲೀಸರು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಮಾಲೂರು ತಾಲ್ಲೂಕು, ಕೋಲಾರ ತಾಲ್ಲೂಕು ಹಾಗೂ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಸೇರಿದಂತೆ ವಿವಿಧೆಡೆ ಜಿಲ್ಲಾ ಲೋಕಾಯುಕ್ತ ಎಸ್‌ಪಿ ಧನಂಜಯ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಸುರೇಶ್ ಬಾಬು ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಕೂಡ. ಈ ಬಾರಿ ಚುನಾವಣೆಯಲ್ಲಿ ಸೋಲು ಕಂಡಿದ್ದರು.
ಎರಡು ತಿಂಗಳ ಹಿಂದೆ ಕೂಡ ಅವರಿಗೆ ಸಂಬಂಧಿಸಿದ ಮೂರು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಡತಗಳನ್ನು ಜಾಲಾಡಿದ್ದರು. ಈ ಸಂದರ್ಭದಲ್ಲಿ ಕಚೇರಿಯ ಕಡತಗಳು ಮನೆಯಲ್ಲಿ ಪತ್ತೆಯಾಗಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.