ಕೆಜಿಎಫ್: ವಿವಿಧ ಕಾರಣಗಳಿಂದಾಗಿ ಮೊಬೈಲ್ ಕಳೆದುಕೊಂಡಿದ್ದ 24 ಮಂದಿಯ ಮೊಬೈಲ್ ಫೋನ್‌ಗಳನ್ನು ಪತ್ತೆ ಹಚ್ಚಿ ಅವುಗಳ ಮಾಲೀಕರಿಗೆ ಹಸ್ತಾಂತರಿಸುವಲ್ಲಿ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು, ಮೊಬೈಲ್ ವಾರಸುದಾರರಿಗೆ ಮೊಬೈಲ್ ಹಸ್ತಾಂತರ ಮಾಡಿದರು.
ಮೊಬೈಲ್ ಕಳೆದುಕೊಂಡವರು ಚಿಂತತರಾಗಬೇಕಿಲ್ಲ. ಪೊಲೀಸ್ ಇಲಾಖೆಯ ಸಿಇಐಆರ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣೆ ಮಾಡಿದರೆ ಪೊಲೀಸರು ಮೊಬೈಲ್‌ಗಳನ್ನು ಪತ್ತೆ ಹಚ್ಚುತ್ತಾರೆ. ಕಳುವಾದ ಮೊಬೈಲ್ ದುರ್ಬಳಕೆಯಾಗುವ ಸಂಭವ ಹೆಚ್ಚಿರುತ್ತದೆ. ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಸಿಇಎನ್ ಪೊಲೀಸ್ ಇನ್‌ಸ್ಪೆಕ್ಟರ್ ಲಕ್ಷ್ಮಿನಾರಾಯಣ, ಸಿಬ್ಬಂದಿ ಮಣಿಕಂಠ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಡಿವೈಎಸ್ಪಿ ಪಾಂಡುರಂಗ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.