ADVERTISEMENT

ಹಾಲಿನ ಗುಣಮಟ್ಟ ಕಾಯ್ದುಕೊಳ್ಳಿ: ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಸಲಹೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 14:23 IST
Last Updated 17 ಫೆಬ್ರುವರಿ 2020, 14:23 IST
ಕೋಲಾರದ ಕೋಚಿಮುಲ್ ಶಿಬಿರದ ಕಚೇರಿಯಲ್ಲಿ ಸೋಮವಾರ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ, ಅಧ್ಯಕ್ಷರಿಗೆ ಒಕ್ಕೂಟದ ನಿರ್ದೇಶಕ ಡಿ.ವಿ.ಹರೀಶ್ ಕುಕ್ಕರ್ ವಿತರಿಸಿದರು.
ಕೋಲಾರದ ಕೋಚಿಮುಲ್ ಶಿಬಿರದ ಕಚೇರಿಯಲ್ಲಿ ಸೋಮವಾರ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ, ಅಧ್ಯಕ್ಷರಿಗೆ ಒಕ್ಕೂಟದ ನಿರ್ದೇಶಕ ಡಿ.ವಿ.ಹರೀಶ್ ಕುಕ್ಕರ್ ವಿತರಿಸಿದರು.   

ಕೋಲಾರ: ‘ಬೇಸಿಗೆ ಕಾಲ ಆರಂಭವಾಗುತ್ತಿದ್ದು, ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಸಹಕಾರ ಸಂಘಗಳ ಸಿಬ್ಬಂದಿ ಒತ್ತು ನೀಡಬೇಕು’ ಎಂದು ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಸಲಹೆ ನೀಡಿದರು.

ಇಲ್ಲಿನ ಕೋಚಿಮುಲ್ ಶಿಬಿರದ ಕಚೇರಿಯಲ್ಲಿ ಸೋಮವಾರ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ, ಅಧ್ಯಕ್ಷರಿಗೆ ಕುಕ್ಕರ್ ವಿತರಿಸಿ ಮಾತನಾಡಿ, ‘ಈ ವಾತಾವರಣಕ್ಕೆ ಹಾಲಿನ ಗುಣಮಟಕ್ಕೆ ಕಡಿಮೆಯಾಗುತ್ತದೆ. ಈ ಬಗ್ಗೆ ಸಿಬ್ಬಂದಿ ರೈತರಿಗೆ ಅರಿವು ಮೂಡಿಸಬೇಕು’ ಎಂದು ತಿಳಿಸಿದರು.

‘ರೈತರಿಗೆ ಎಸ್‌ಎನ್‌ಎಫ್‌ ಫಳಿತಾಂಶದ ಆಧಾರದ ಮೇರೆಗೆ ದರ ನೀಡಲಾಗುತ್ತಿದೆ. ರಾಸುಗಳ ಆರೋಗ್ಯ ತಾಪಾಸಣೆ ಮಾಡಿಸಬೇಕು. ಪಶು ವೈದ್ಯರು ಶಿಫಾರಸ್ಸು ಮಾಡಿದ ಔಷದಿಗಳನ್ನು ರಾಸುಗಳಿಗೆ ನೀಡಬೇಕು. ಇದರಿಂದ ಒಕ್ಕೂಟಕ್ಕೆ ಲಾಭದೊರೆಯುತ್ತದೆ’ ಎಂದು ಹೇಳಿದರು.

ADVERTISEMENT

‘ಹೈನೋದ್ಯಮವು ಎರಡು ಜಿಲ್ಲೆಯ ರೈತರ ಜೀವನಾಡಿಯಾಗಿದೆ. ತಾಂತ್ರಿಕ ಸಮಸ್ಯೆಗಳಿಂದ ಹಾಕಿನ ಉತ್ಪಾದನೆಯೂ ಕಡಿಮೆಯಾಗಿದೆ. ಇದಕ್ಕೆ ಸಮಸ್ಯೆಗಳು ಏನು ಎಂಬುದು ರೈತರಿಗೆ ಜಾಗೃತಿ ಮೂಡಿಸಬೇಕು. ಆಂಧ್ರ, ತಮಿಳುನಾಡು, ಮಹಾರಾಷ್ಟ್ರ ರಾಜ್ಯದವರು ಹಸುಗಳ ಖರೀದಿಗೆ ಈ ಭಾಗಕ್ಕೆ ಬರುತ್ತಿದ್ದು, ಯಾರು ಸಹ ಮಾರಾಟಮಾಡಬಾರದು’ ಎಂದು ಕೋರಿದರು.

‘ಹಸುಗಳನ್ನು ಮಾರಾಟ ಮಾಡುವುದರಿಂದ ಮುಂದಿನ ದಿನಗಳಲ್ಲಿ ರೈತರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ರೈತರು ಈಗಿನಿಂದಲೇ ಎಚ್ಚೆತ್ತುಕೊಂಡು ಹೈನೋದ್ಯಮ ಅಭಿವೃದ್ಧಿಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

‘ಹೈನೋದ್ಯಮವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಡಿಸಿಸಿ ಬ್ಯಾಂಕ್ ಸಹಯೋಗದಲ್ಲಿ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಕರ್ಯ ಕಲ್ಪಿಸಲು ಯೋಜನೆ ರೂಪಿಸಿದ್ದು, ರೈತರ ಇದರ ಸೌಕರ್ಯ ಪಡೆದುಕೊಳ್ಳಲು ಮುಂದಾಗಬೇಕು’ ಎಂದು ತಿಳಿಸಿದರು.

ಶಿಬಿರದ ಉಪ ವ್ಯವಸ್ಥಾಪಕ ಡಾ.ಎ.ಸಿ.ಶ್ರೀನಿವಾಸಗೌಡ ಮಾತನಾಡಿ, ‘ರೈತರ ಅನುಕೂಲಕ್ಕಾಗಿ ಒಕ್ಕೂಟದಿಂದ ಕೋಮುಲ್ ವಿಮಾ ಜಾರಿಗೆ ತಂದಿದ್ದು, ಕಡ್ಡಾಯವಾಗಿ ವಿಮೆ ಮೊತ್ತ ಪಾವತಿ ಮಾಡಿದರೆ ತೊಂದರೆಯಾದಲ್ಲಿ ಪರಿಹಾರ ಕಲ್ಪಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.