ADVERTISEMENT

ವಿದ್ಯಾರ್ಥಿನಿಲಯ ಕಾಮಗಾರಿ ಗುಣಮಟ್ಟ ಕಾಪಾಡಿ: ಶಾಸಕ ಕೆ.ಶ್ರೀನಿವಾಸಗೌಡ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2020, 13:07 IST
Last Updated 16 ಫೆಬ್ರುವರಿ 2020, 13:07 IST
ಕೋಲಾರ ತಾಲ್ಲೂಕಿನ ದೊಡ್ಡಹಸಾಳ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಭಾನುವಾರ ಆಯೋಜಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಕೆ.ಶ್ರೀನಿವಾಸಗೌಡ ಭೂಮಿ ಪೂಜೆ ನೆರವೇರಿಸಿದರು.
ಕೋಲಾರ ತಾಲ್ಲೂಕಿನ ದೊಡ್ಡಹಸಾಳ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಭಾನುವಾರ ಆಯೋಜಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಶಾಸಕ ಕೆ.ಶ್ರೀನಿವಾಸಗೌಡ ಭೂಮಿ ಪೂಜೆ ನೆರವೇರಿಸಿದರು.   

ಕೋಲಾರ: ‘ಮಕ್ಕಳ ವಾಸಕ್ಕಾಗಿ ನಿರ್ಮಾಣ ಮಾಡುತ್ತಿರುವ ವಸತಿ ಶಾಲಾ ಕಟ್ಟಡದ ಕಾಮಗಾರಿ ಗುಣಮಟ್ಟದಿಂದ ಇರಬೇಕು, ಕಳಪೆ ಕಂಡುಬಂದರೆ ಎಂಜನಿಯರ್‌ ಮತ್ತು ಗುತ್ತಿಗೆದಾರನ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಎಚ್ಚರಿಕೆ ನೀಡಿದರು.

ತಾಲ್ಲೂಕಿನ ದೊಡ್ಡಹಸಾಳ ಗ್ರಾಮದಲ್ಲಿ ಜಿಲ್ಲಾಡಳಿತದಿಂದ ಭಾನುವಾರ ಆಯೋಜಿಸಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ‘ಇತ್ತೀಚಿಗೆ ಬಹುತೇಕ ಕಡೆ ಸರ್ಕಾರಿ ಕಟ್ಟಡಗಳು ನಿರ್ಮಾಣ ಹಂತದಲ್ಲಿ ಕುಸಿದಿರುವುದು ಗಮನಕ್ಕೆ ಬಂದಿದೆ. ಇದಕ್ಕೆ ಸಂಬಂಧಪಟ್ಟವರು ಎಚ್ಚರಿಕೆಯಿಂದ ಕೆಲಸ ಮಾಡಿ’ ಎಂದು ಸೂಚಿಸಿದರು.
‘ಇಲಾಖೆಯ ತಾಂತ್ರಿಕ ವಿಭಾಗದ ಅಧಿಕಾರಿಗಳು ಪ್ರತಿ ಹಂತದಲ್ಲೂ ಕಾಮಗಾರಿ ಗುಣಮಟ್ಟ ಪರಿಶೀಲಿಸಬೇಕು. ಏನಾದರೂ ಲೋಪ ಕಂಡುಬಂದರೆ ಅದನ್ನು ಸರಿಪಡಿಸುವ ಕೆಲಸ ಮಾಡಬೇಕು. ಅದು ಬಿಟ್ಟು ಗುತ್ತಿಗೆದಾರರೊಂದಿಗೆ ಶಾಮೀಲಾದರೆ ಸಮಸ್ಯೆ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
‘ವಿದ್ಯಾರ್ಥಿನಿಲಯಕ್ಕೆ ಕಡ್ಡಾಯವಾಗಿ ಕಾಪೌಂಡ್ ನಿರ್ಮಾಣ ಮಾಡಬೇಕು. ಇದು ಮಕ್ಕಳ ವಿದ್ಯಾಭ್ಯಾಸಕ್ಕೆ ಉಪಯೋಗವಾಗುವುದರಿಂದ ಇಂತಹ ಕೆಲಸಗಳನ್ನು ಒಂದು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಬಾಡಿಗೆ ಕಟ್ಟಗಳಲ್ಲಿ ನೆಡೆಯುತ್ತಿರುವ ವಿದ್ಯಾರ್ಥಿನಿಲಯಗಳಿಗೆ ಸ್ವಂತ ಕಟ್ಟಡ ಕಲ್ಪಿಸಲು ಪ್ರಮಾಣಿಕ ಪ್ರಯತ್ನ ನಡೆಸಲಾಗುವುದು’ ಎಂದು ಭರವಸೆ ನೀಡಿದರು.
ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಅಧಿಕಾರಿ ಎಂ.ಮೈಲೇರಪ್ಪ ಮಾತನಾಡಿ, ‘ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಇಲಾಖೆಯಿಂದ ₨ ೧.೯೯ ಕೋಟಿ ಬಿಡುಗಡೆಯಾಗಿದ್ದು, ಒಂದು ವರ್ಷದೊಳಗೆ ಕಟ್ಟಡ ನಿರ್ಮಾಣ ಪೂರ್ಣಗೊಳ್ಳಲಿದೆ. ಕಟ್ಟಡ ನಿರ್ಮಾಣದ ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದ್ದು, ಪ್ರತಿ ಹಂತದಲ್ಲೂ ಕಾಮಗಾರಿಯ ಗುಣಮಟ್ಟ ಪರಿಶೀಲಿಸಲಾಗುವುದು’ಎ ಂದು ಹೇಳಿದರು.
ನಿರ್ಮಿತಿ ಕೇಂದ್ರದ ಹಿರಿಯ ಯೋಜನಾಧಿಕಾರಿ ವೆಂಕಟೇಶ್‌ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯೆ ಎ.ಎಚ್. ವೆಂಕಟಲಕ್ಷ್ಮಮ್ಮ, ತಾಲ್ಲೂಕು ಪಂಚಾಯಿತಿ ಸದಸ್ಯೆ ಸವಿತಾ, ಎಪಿಎಂಸಿ ಅಧ್ಯಕ್ಷ ನಾಗರಾಜ್, ವಕ್ಫ್ ಬೋರ್ಡ್ ಅಧ್ಯಕ್ಷ ಜಾಮೀನ್ ವುಲ್ಲಾ ಖಾನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT