ADVERTISEMENT

ಮಲ್ಲನಾಯಕನಹಳ್ಳಿ ಟಿಎಪಿಸಿಎಂಎಸ್‌ಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2025, 7:49 IST
Last Updated 20 ಡಿಸೆಂಬರ್ 2025, 7:49 IST
ಮುಳಬಾಗಿಲು ತಾಲ್ಲೂಕಿನ ಮಲ್ಲನಾಯಕನಹಳ್ಳಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಹೊಸದಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ
ಮುಳಬಾಗಿಲು ತಾಲ್ಲೂಕಿನ ಮಲ್ಲನಾಯಕನಹಳ್ಳಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಹೊಸದಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ   

ಮುಳಬಾಗಿಲು: ತಾಲ್ಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸೇವಾ ಸಂಘದ ನೂತನ ಅಧ್ಯಕ್ಷ ಆಗಿ ಗುರುಪ್ರಸಾದ್ ಹಾಗೂ ಉಪಾಧ್ಯಕ್ಷ ಆಗಿ ಶೆಟ್ಟಿಕಲ್ಲು ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾದರು. 

ಈ ಹಿಂದಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ ಚುನಾವಣೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಕ್ರಮವಾಗಿ ಗುರುಪ್ರಸಾದ್ ಮತ್ತು ಶೆಟ್ಟಿಕಲ್ಲು ಶ್ರೀನಿವಾಸ್ ಅವರು ಮಾತ್ರವೇ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ, ಈ ಇಬ್ಬರು ಅವಿರೋಧವಾಗಿ ಆಯ್ಕೆಯಾದರು. 

ನೂತನ ಅಧ್ಯಕ್ಷ ಗುರುಪ್ರಸಾದ್ ಮಾತನಾಡಿ, ಸಂಘದಿಂದ ರೈತರಿಗೆ ಸಿಗಬೇಕಾದ ಎಲ್ಲ ರೀತಿಯ ಸೌಲಭ್ಯಗಳು ಹಾಗೂ ಬಡವರಿಗೆ ಸಿಗಬೇಕಾದ ಅನುಕೂಲಗಳನ್ನು ಪ್ರಾಮಾಣಿಕವಾಗಿ ಒದಗಿಸಲು ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು. 

ADVERTISEMENT

ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪ ವಿಶ್ವನಾಥ್, ಆರ್.ಆರ್. ರಾಜೇಂದ್ರಗೌಡ, ಗುಜ್ಜನಹಳ್ಳಿ ಮಂಜುನಾಥ್, ಸೊಣ್ಣೇಗೌಡ, ತಾವರೆಕೆರೆ ನಾರಾಯಣಗೌಡ, ಮೋಹನ್, ಪೆದ್ದಪ್ಪಯ್ಯ, ವಿನೋದ್ ಕುಮಾರ್, ಎಂ.ಎನ್.ಹಳ್ಳಿ ಮಂಜುನಾಥ್, ಕೃಷ್ಣಮೂರ್ತಿ ಹಾಗೂ ಎಲ್ಲ ನಿರ್ದೇಶಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.