ADVERTISEMENT

ಮಾಲೂರು ಕ್ಷೇತ್ರ | ಬಿಗಿ ಭದ್ರತೆಯಲ್ಲಿ ಮರು ಮತ ಎಣಿಕೆ: ಮಾಧ್ಯಮದವರಿಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 5:10 IST
Last Updated 11 ನವೆಂಬರ್ 2025, 5:10 IST
   

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಕಾರ್ಯ ಭಾರಿ ಬಿಗಿ ಬಂದೋಬಸ್ತಿನಲ್ಲಿ ನಡೆಯುತ್ತಿದೆ. ಮತ ಎಣಿಕೆ ಕೇಂದ್ರಕ್ಕೆ ಮಾಧ್ಯಮದವರನ್ನು ನಿರ್ಬಂಧಿಸಲಾಗಿದೆ.

ಮರು ಮತ ಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ. ಹೀಗಾಗಿ, ಫಲಿತಾಂಶವನ್ನು ಪ್ರಕಟಿಸುವಂತಿಲ್ಲ.

ನಗರ ಹೊರವಲಯದ ಟಮಕದಲ್ಲಿರುವ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಮತ ಎಣಿಕೆ ನಡೆಯುತ್ತಿದೆ. ನಾಲ್ಕು ಟೇಬಲ್‌ಗಳಲ್ಲಿ ಅಂಚೆ ಮತ ಎಣಿಕೆ ಹಾಗೂ 14 ಟೇಬಲ್‌ಗಳಲ್ಲಿ ಇವಿಎಂ ಮತಗಳ ಎಣಿಕೆ ನಡೆಯುತ್ತಿದೆ. ಅಭ್ಯರ್ಥಿಗಳ ಏಜೆಂಟರು ಇದ್ದಾರೆ. 1 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ADVERTISEMENT

ಹಾಲಿ‌ ಶಾಸಕ ಕೆ.ವೈ.ನಂಜೇಗೌಡ, ಪ್ರತಿಸ್ಪರ್ಧಿ ಕೆ.ಎಸ್.ಮಂಜುನಾಥ ಗೌಡ ಎಣಿಕೆ ಕೇಂದ್ರದಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.