ADVERTISEMENT

ಸಾಹಿತ್ಯ ಕ್ಷೇತ್ರಕ್ಕೆ ಮಾಲೂರಿಗೆ ವಿಶೇಷ ಸ್ಥಾನ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 6:21 IST
Last Updated 2 ನವೆಂಬರ್ 2025, 6:21 IST
ಮಾಲೂರು ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ.ನಂಜೇಗೌಡ ನಾಡ ದೇವಿಗೆ ಪೂಜೆ ಸಲ್ಲಿಸಿದರು. ಪಲ್ಲಕ್ಕಿ ವಾಹನವನ್ನು ಚಾಲನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು

ಮಾಲೂರು: ನಗರದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ. ನಂಜೇಗೌಡ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

ನಂತರ ಮಾತನಾಡಿ, ಗಡಿ ಭಾಗವಾದ ಮಾಲೂರಿನಲ್ಲಿ ಕನ್ನಡ ಭಾಷೆ‌ ಉಳಿಸಿ ಬೆಳೆಸುತ್ತಿರುವ ಕನ್ನಡಪರ ಸಂಘಟನೆಗಳ ಕಾರ್ಯವನ್ನು ಅನನ್ಯ ಎಂದು ಬಣ್ಣಿಸಿದರು.

ಜ್ಞಾನಪೀಠ ಪ್ರಶಸ್ತಿ ವಿಜೇತ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ತವರೂರಾದ ಮಾಲೂರು ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಸ್ಥಾನ ಹೊಂದಿದೆ ಎಂದು ಅಭಿಪ್ರಾಯಪಟ್ಟರು.

ADVERTISEMENT

ತಾಲ್ಲೂಕು ಕಚೇರಿ ಮುಂಭಾಗದಲ್ಲಿ ನಾಡದೇವಿ ಭುವನೇಶ್ವರಿ ಪಲ್ಲಕ್ಕಿಗೆ ಪೂಜೆ ಸಲ್ಲಿಸಿ ಸಾಂಸ್ಕೃತಿಕ ಚಾಲನೆ ನೀಡಲಾಯಿತು. ವಿವಿಧ ವೇಷಭೂಷಣದ ಮೆರವಣಿಗೆ ನಗರದಾದ್ಯಂತ ಸಾಗಿತು.

ತಹಶೀಲ್ದಾರ್ ಎಂ.ವಿ.ರೂಪಾ, ನಗರ ಸಭಾಧ್ಯಕ್ಷೆ ವಿಜಯಲಕ್ಷ್ಮಿ, ನಗರ ಪ್ರಾಧಿಕಾರದ ಅಧ್ಯಕ್ಷ ಆಹಮದ್ ನಯಿಂ ಉಲ್ಲಾ ಸೇರಿದಂತೆ ಅನೇಕ ಅಧಿಕಾರಿಗಳು ಮತ್ತು ‌ಮುಖಂಡರು ಉಪಸ್ಥಿತರಿದ್ದರು.