ADVERTISEMENT

ಚೀನಾ ವೈರಸ್ | ಆತಂಕ ಬೇಡ: ಸಚಿವ ದಿನೇಶ್ ಗುಂಡೂರಾವ್

ಆ್ಯಂಬುಲೆನ್ಸ್ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅಭಯ

​ಪ್ರಜಾವಾಣಿ ವಾರ್ತೆ
Published 9 ಜನವರಿ 2025, 12:47 IST
Last Updated 9 ಜನವರಿ 2025, 12:47 IST
<div class="paragraphs"><p>ಮಾಲೂರು ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿ ಗುರುವಾರ ವಿಕ್ರಮ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ, ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ವಿತರಣೆ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಗೆ ಎರಡು ಆ್ಯಂಬುಲೆನ್ಸ್‌ ವಿತರಣೆ ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.&nbsp;&nbsp;</p></div>

ಮಾಲೂರು ತಾಲ್ಲೂಕಿನ ಲಿಂಗಾಪುರ ಗ್ರಾಮದಲ್ಲಿ ಗುರುವಾರ ವಿಕ್ರಮ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ, ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ವಿತರಣೆ ಹಾಗೂ ತಾಲ್ಲೂಕು ಆರೋಗ್ಯ ಇಲಾಖೆಗೆ ಎರಡು ಆ್ಯಂಬುಲೆನ್ಸ್‌ ವಿತರಣೆ ಕಾರ್ಯಕ್ರಮಕ್ಕೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.  

   

ಮಾಲೂರು: ಚೀನಾದ ವೈರಸ್ ಬಗ್ಗೆ ರಾಜ್ಯದ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಬಿಜೆಪಿ ನಾಯಕರು ಮತ್ತು ಮಾಧ್ಯಮ ಪ್ರತಿನಿಧಿಗಳು ಈ ಬಗ್ಗೆ ಮಾಹಿತಿ ಇಲ್ಲದೆ ಮಾತನಾಡುತ್ತಿದ್ದಾರೆ. ವೈರಸ್ ಹರಡದಂತೆ ನಿಗ್ರಹಿಸಲು ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. 

ವಿಕ್ರಮ್ ಚಾರಿಟಬಲ್ ಟ್ರಸ್ಟ್ ವತಿಯಿಂದ ತಾಲ್ಲೂಕು ಆರೋಗ್ಯ ಇಲಾಖೆಗೆ ಎರಡು ಆ್ಯಂಬುಲೆನ್ಸ್ ನೀಡುತ್ತಿರುವ ಕಾರ್ಯಕ್ರಮವು ಗುರುವಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ನಕ್ಸಲರನ್ನು ಸಮಾಜದ ಮುಖ್ಯ ವಾಹಿನಿಗೆ ತರುವುದು ನಮ್ಮ ಕರ್ತವ್ಯ. ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ನಡೆದಿದೆ. ಬಿಜೆಪಿ ಅವರು ದುರುದ್ದೇಶದಿಂದ ಮಾತನಾಡುತ್ತಾರೆ’ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ADVERTISEMENT

ವಿಕ್ರಮ್ ಅಫಘಾತದಲ್ಲಿ ಸಾವನ್ನಪ್ಪಿದ್ದ ಕಾರಣ ವಿಕ್ರಮ್ ಚಾರಿಟಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ, ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ವಿತರಿಸಲಾಯಿತು. 

ವಿಕ್ರಮ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕೃಷ್ಣಪ್ಪ ತಮ್ಮ ಮಗನ ಹೆಸರಿನಲ್ಲಿ ಸುಮಾರು ಏಳು ವರ್ಷಗಳಿಂದ ಸಮಾಜಮೂಖಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಪತ್ರಿ ವರ್ಷ ತಮ್ಮ ಮಗನ ನೆನಪಿಗಾಗಿ, ರಕ್ತದಾನ ಶಿಬಿರ, ದ್ವಿಚಕ್ರ ವಾಹನ ಚಾಲಕರಿಗೆ ಉಚಿತವಾಗಿ ಹೆಲ್ಮೆಟ್‌ಗಳನ್ನು ನೀಡಲಾಗುತ್ತಿದೆ. ಇವರು ಸತತ ಏಳು ವರ್ಷಗಳಿಂದ ಸಮಾಜಮುಖಿ ಕೆಲಸ ಮುಂದುವರಿಸಿಕೊಂಡು ಬರುತ್ತಿದ್ದಾರೆ ಎಂದು ಹೇಳಿದರು.

ಸ್ಥಳೀಯ ಶಾಸಕ ಕೆ.ವೈ.ನಂಜೇಗೌಡ ತಾಲ್ಲೂಕಿನ ಅಭಿವೃದ್ಧಿ ಕಡೆ ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳಿಂದ ಹಿಡಿದು, ಸಚಿವರ ಬಳಿ ಉತ್ತಮ ಬಾಂಧವ್ಯ ಬೆಳಸಿಕೊಂಡಿದ್ದು, ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಅನುದಾನ ತರುತ್ತಿದ್ದಾರೆ. ಮಾಲೂರು ತಾಲ್ಲೂಕು ಅಭಿವೃದ್ಧಿಗೆ ಸರ್ಕಾರದಿಂದ ಸುಮಾರು ₹2,008 ಕೋಟಿ ಬಿಡುಗಡೆ ಮಾಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. 

ಶಾಸಕ ಕೆ.ವೈ. ನಂಜೇಗೌಡ ಮಾತನಾಡಿ, ಸಚಿವ ದಿನೇಶ್ ಗುಂಡೂರಾವ್ ಹಿಂದೆ ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದಾಗ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲು ಮಾಲೂರಿಗೆ ಬಂದಿದ್ದರು. ಇಲ್ಲಿನ ಸರ್ಕಾರಿ ಆಸ್ಪತ್ರೆ ಕಟ್ಟಡ ಶಿಥಿಲವಾಗಿದ್ದು, ಸಾರ್ವಜನಕರಿಗೆ ತುಂಬಾ ತೊಂದರೆಯಾಗಿದೆ. ಈ ನಿಟ್ಟಿನಲ್ಲಿ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಆಸ್ಪತ್ರೆ ನಿರ್ಮಾಣಕ್ಕಾಗಿ ಕಂದಾಯ ಇಲಾಖೆ ವತಿಯಿಂದ 10 ಎಕರೆ ಸರ್ಕಾರಿ ಭೂಮಿ ಗುರುತಿಸಲಾಗಿದೆ ಎಂದರು. 

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರಮೇಶ್, ಇಒ ಕೃಷ್ಣಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್, ವಿಕ್ರಮ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಲಿಂಗಾಪುರ ಕಿಟ್ಟಿ, ಪುರಸಭಾಧ್ಯಕ್ಷೆ ಕೋಮಲ ನಾರಾಯಣ್, ರಾಜಪ್ಪ, ಜಿಲ್ಲಾ ಆರೋಗ್ಯಾಡಳಿತಾಧಿಕಾರಿ ಡಾ.ಶ್ರೀನಿವಾಸ್, ತಾಲ್ಲೂಕು ಆರೋಗ್ಯ ಆಡಳಿತಾಧಿಕಾರಿ ಡಾ.ವಸಂತ್, ಕೆಪಿಸಿಸಿ ಸದಸ್ಯರಾದ ಅಂಜನಿ ಸೋಮಣ್ಣ, ಪ್ರದೀಪ್ ರೆಡ್ಡಿ, ಆಹಮದ್ ನಯುಂ, ಮದುಸೂದನ್, ವಿಜಯನಾರಸಿಂಹ, ಮಂಜುನಾಥ್ (ಜಾಕಿ), ಹನುಮಂತರೆಡ್ಡಿ, ಬಾಳಿಗಾನಹಳ್ಳಿ ಶ್ರೀನಿವಾಸ್ ಭಾಗವಹಿಸಿದ್ದರು.

ಶೀಘ್ರವೇ ಸುಸಜ್ಜಿತ ಆಸ್ಪತ್ರೆ ಭರವಸೆ

ರಾಜ್ಯದ ತಾಲ್ಲೂಕು ಕೇಂದ್ರಗಳ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಈ ಮೂಲಕ ಆಸ್ಪತ್ರೆಗಳಿಗೆ ವೈದ್ಯರು ಮತ್ತು ಸಿಬ್ಬಂದಿ ಕೊರತೆ ಇಲ್ಲದಂತೆ ನೋಡಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.  ಇಲ್ಲಿನ ಸರ್ಕಾರಿ ಆಸ್ಪತ್ರೆ ಕಟ್ಟಡವು ಸಂಪೂರ್ಣವಾಗಿ ಶಿಥಿಲಗೊಂಡಿದೆ. ಈ ಆಸ್ಪತ್ರೆ ದುರಸ್ತಿಗೆ ಶಾಸಕ ನಂಜೇಗೌಡ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಮುಂದಿನ ಬಜೆಟ್‌ನಲ್ಲಿ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಅಗತ್ಯವಿರುವ ಹಣ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.