ADVERTISEMENT

ಮಾಲೂರು | ವಿದ್ಯಾರ್ಥಿಗಳ ಯೋಗ ಕಸರತ್ತು

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 16:14 IST
Last Updated 22 ಜೂನ್ 2025, 16:14 IST
ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ ವೆಂಕಟರಮಣ ದೇವಾಲಯದ ಆವರಣದಲ್ಲಿ ಸಾಮೂಹಿಕ ಯೋಗ ನಡೆಯಿತು
ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ ವೆಂಕಟರಮಣ ದೇವಾಲಯದ ಆವರಣದಲ್ಲಿ ಸಾಮೂಹಿಕ ಯೋಗ ನಡೆಯಿತು   

ಮಾಲೂರು: ತಾಲ್ಲೂಕಿನ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣ ದೇವಾಲಯದ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಮೂಹಿಕ ಯೋಗ ಕಾರ್ಯಕ್ರಮ ನಡೆಯಿತು.

ಪಿಡಿಒ ಹರೀಂದ್ರ ಗೋಪಾಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ' ಎಂಬ ಘೋಷವಾಕ್ಯದೊಂದಿಗೆ 11ನೇ ಅಂತರರಾಷ್ಟ್ರೀಯ ಯೋಗಭ್ಯಾಸ ಮಾಡಲಾಯಿತು. ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಲು ಯೋಗ ಸಹಕಾರಿಯಾಗಲಿದೆ ಎಂದು ಹೇಳಿದರು.

ರಾಧಾಕೃಷ್ಣ ಯೋಗ ಸಮಿತಿ ಯೋಗ ಶಿಕ್ಷಕ ವಿಶ್ವೇಶ್ವರಯ್ಯ, ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಸನಗಳ ಅಭ್ಯಾಸ ಮಾಡಿಸಿದರು.

ADVERTISEMENT

ಯೋಗಭ್ಯಾಸದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಟಿ.ಸೆಲ್ವಮಣಿ, ಪೇಷ್ಕಾರ್ ಚಲುವಸ್ವಾಮಿ, ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ಸದಸ್ಯ ಆಲಂಬಾಡಿ ಕುಮಾರ್, ಸದಸ್ಯರಾದ ಸತೀಶ್ ರೆಡ್ಡಿ, ಬಾಬು, ಲಕ್ಷ್ಮಮ್ಮ, ಯೋಗ ಶಿಕ್ಷಕರಾದ ಕೃಷ್ಣಪ್ಪ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀನಿವಾಸನ್, ಮುಖಂಡರಾದ ಕೋಟಿ ಶ್ರೀನಿವಾಸ್, ಎಂ.ಶ್ರೀನಿವಾಸ್, ಗ್ರಂಥಾಲಯ ಮೇಲ್ವಿಚಾರಕ ನಾರಾಯಣಪ್ಪ, ಗ್ರಾಮ ಪಂಚಾಯಿತಿ ಸಿಬ್ಬಂದಿ ಮಾದೇಶ್, ವೆಂಕಟೇಶ್, ಮುರುಗೇಶ್, ಬಾಯಮ್ಮ, ಜಲಗಾರರಾದ ಅರುಣ್ ಕುಮಾರ್, ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.