
ಮಾಲೂರು: ನಗರದಲ್ಲಿ ಅಸಮರ್ಪಕ ಒಳಚರಂಡಿ ವ್ಯವಸ್ಥೆಯಿಂದ ಬಹತೇಕ ವಾರ್ಡ್‌ಗಳಲ್ಲಿ ಕೊಳಚೆ ನೀರು ಚೇಂಬರ್‌ಗಳಿಂದ ಹೊರಬಂದು ರಸ್ತೆ ಮೇಲೆ ಹರಿಯುತ್ತಿದ್ದು, ಸಾರ್ವಜನಿಕರು ಮುಗು ಮುಚ್ಚಿಕೊಂಡು ಓಡಾಡುವಂತಾಗಿದೆ.
ನಗರದಲ್ಲಿ 2010ರಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ₹22 ಕೋಟಿ ವೆಚ್ಚದಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳಲಾಗಿತ್ತು. ನಗರದಾದ್ಯಂತ 86 ಕಿ.ಮೀ ಉದ್ದ ಕೊಳವೆ ಮಾರ್ಗ ನಿರ್ಮಾಣ ಮಾಡಿದ್ದು, 3,299 ಮ್ಯಾನ್ ಹೋಲ್‌ಗಳನ್ನು ಅಳವಡಿಸಲಾಗಿದೆ. ನಗರದ ಹೊರವಲಯದಲ್ಲಿ 2017ರಲ್ಲಿ ₹4 ಕೋಟಿ ವೆಚ್ಚದಲ್ಲಿ ಮಲೀನ ನೀರು ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗಿತ್ತು. ಆದರೆ, ಘಟಕ ಸ್ಥಗಿತಗೊಂಡು ವರ್ಷಗಳು ಕಳೆದಿದೆ. ಹಾಗಾಗಿ ನಗರದ ಮಲೀನ ನೀರು ಒಳ ಚರಂಡಿಯಲ್ಲಿ ಹರಿಯಲು ಅವಕಾಶ ಇಲ್ಲದೆ ನಗರದ ರಸ್ತೆಗಳಲ್ಲಿ ಹರಿಯುತ್ತಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.
ನಗರಸಭೆಯಿಂದ ಮಲೀನ ನೀರು ಹರಿಯುವ ಚೆಂಬರ್‌ಗಳ ಬಳಿ ಪೈಪ್‌ಲೈನ್ ದುರಸ್ತಿ ಕಾರ್ಯ ನಡೆಯುತ್ತಿದೆ. ಸಾರ್ವಜನಿಕರು ದೂರು ನೀಡಿದ ತಕ್ಷಣ ಅಥವಾ ನಗರಸಭೆ ಗಮನಕ್ಕೆ ಬಂದ ತಕ್ಷಣ ಚೆಂಬರ್ ದುರಸ್ತಿ ಮಾಡಲಾಗುತ್ತಿದೆ.ರಾಜಣ್ಣ ಆರೋಗ್ಯಾಧಿಕಾರಿ ನಗರಸಭೆ
ನಗರದಲ್ಲಿ ಒಳಚರಂಡಿ ವ್ಯವಸ್ಥೆ ಹಾಳಾಗಿದ್ದು ರಸ್ತೆಗಳಲ್ಲಿ ಕೊಳಚೆ ನೀರು ಚೆಂಬರ್‌ಗಳಿಂದ ಹೊರ ಬರುತ್ತಿದೆ. ಇದರಿಂದ ನಾಗರಿಕರಿಗೆ ತೊಂದರೆಯಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.ಕೆ.ದಿನೇಶ್ ಬಾಬು ಮಾಲೂರು ನಿವಾಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.