ADVERTISEMENT

ಕೋಲಾರ: ವ್ಯಕ್ತಿಯ ಬರ್ಬರ ಕೊಲೆ–ಹೆದ್ದಾರಿಯಲ್ಲಿ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2025, 6:29 IST
Last Updated 22 ಅಕ್ಟೋಬರ್ 2025, 6:29 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಕೋಲಾರ: ತಾಲ್ಲೂಕಿನ ಕೆಂದಟ್ಟಿ ಬಳಿ ಮಂಗಳವಾರ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿದ್ದು, ಶವವು ರಾಷ್ಟ್ರೀಯ ಹೆದ್ದಾರಿ–75ರ ಬಳಿ ಪತ್ತೆಯಾಗಿದೆ.

ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯಳೇಸಂದ್ರ ಗ್ರಾಮದ ಅಫ್ರೀದ್ (28) ಕೊಲೆಯಾದ ವ್ಯಕ್ತಿ.

ADVERTISEMENT

ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಬಳಿಕ ಶವವನ್ನು ತಂದು ಆಟೋದಲ್ಲಿ ಬಿಸಾಡಿ ಪರಾರಿಯಾಗಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಕೆಂದಟ್ಟಿ ಬಳಿ ಆಟೋದಲ್ಲಿ ಅಫ್ರೀದ್ ಎಂಬುವರ ಶವ ಪತ್ತೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದರು.

ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಿಕೊಂಡು ಎರಡು ತಂಡಗಳನ್ನು ರಚಿಸಿ ತನಿಖೆ ಆರಂಭಿಸಲಾಗಿದೆ. ಅಫ್ರೀದ್ ಮೂಲತಃ ಬಂಗಾರಪೇಟೆ ತಾಲ್ಲೂಕಿನ ಯಳೇಸಂದ್ರದವರಾಗಿದ್ದು, ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು. ಅವರದೇ ಆಟೋದಲ್ಲಿ ಶವ ಪತ್ತೆಯಾಗಿದ್ದು, ಹಲವು ಅನುಮಾನಗಳಿವೆ. ಸದ್ಯ ತನಿಖೆ ಚುರುಕುಗೊಳಿಸಲಾಗಿದೆ. ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.