ADVERTISEMENT

ಎಳ್ಳು–ಬೆಲ್ಲದ ಜತೆ ಮಾಸ್ಕ್‌ ವಿತರಣೆ

​ಪ್ರಜಾವಾಣಿ ವಾರ್ತೆ
Published 15 ಜನವರಿ 2022, 14:20 IST
Last Updated 15 ಜನವರಿ 2022, 14:20 IST
ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸದಸ್ಯರು ಕೋಲಾರದಲ್ಲಿ ಶನಿವಾರ ಸಾರ್ವಜನಿಕರಿಗೆ ಎಳ್ಳು ಬೆಲ್ಲದ ಜತೆಗೆ ಮಾಸ್ಕ್‌ ವಿತರಿಸಿದರು
ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸದಸ್ಯರು ಕೋಲಾರದಲ್ಲಿ ಶನಿವಾರ ಸಾರ್ವಜನಿಕರಿಗೆ ಎಳ್ಳು ಬೆಲ್ಲದ ಜತೆಗೆ ಮಾಸ್ಕ್‌ ವಿತರಿಸಿದರು   

ಕೋಲಾರ: ‘ಸಾರ್ವಜನಿಕರು ಸೇವಾ ಮನೋಭಾವ ಮೈಗೂಡಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಬೇಕು’ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ಎನ್‌.ಗೋಪಾಲಕೃಷ್ಣಗೌಡ ತಿಳಿಸಿದರು.

ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಇಲ್ಲಿ ಶನಿವಾರ ಸಾರ್ವಜನಿಕರಿಗೆ ಎಳ್ಳು ಬೆಲ್ಲದ ಜತೆಗೆ ಮಾಸ್ಕ್‌ ವಿತರಿಸಿ ಕೋವಿಡ್‌ ಬಗ್ಗೆ ಜಾಗೃತಿ ಮೂಡಿಸಿ ಮಾತನಾಡಿ, ‘ಜನರ ನೆರೆಹೊರೆಯವರಿಗೆ ಕೋವಿಡ್‌ ತಿಳಿ ಹೇಳಬೇಕು’ ಎಂದು ಸಲಹೆ ನೀಡಿದರು.

‘ಕೊರೊನಾ ಸೋಂಕಿನ ಬಗ್ಗೆ ಜಾಗೃತರಾಗುವಂತೆ ಅರಿವು ಮೂಡಿಸುವುದು ಅತ್ಯಗತ್ಯ. ಕೋವಿಡ್‌ ಲಕ್ಷಣಗಳಾದ ಜ್ವರ, ಕೆಮ್ಮು, ನೆಗಡಿ, ಶೀತ ಕಂಡುಬಂದರೆ ತಕ್ಷಣವೇ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಬೇಕು. ಮನೆಯಿಂದ ಹೊರ ಬರುವಾಗ ತಪ್ಪದೇ ಮಾಸ್ಕ್‌ ಧರಿಸಬೇಕು. ಜತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಅಂತರ ಕಾಯ್ದುಕೊಳ್ಳಬೇಕು. ಆಗಾಗ್ಗೆ ಕೈಗಳನ್ನು ಸ್ಯಾನಿಟೈಸರ್‌ನಿಂದ ಸ್ವಚ್ಛಗೊಳಿಸಿಕೊಳ್ಳಬೇಕು’ ಎಂದರು.

ADVERTISEMENT

‘ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಎಂಬಂತೆ ಇತರರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಜನರು ಆರೋಗ್ಯವಾಗಿದ್ದರೆ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ. ಕೋವಿಡ್‌ ತಡೆಗೆ ಸಾರ್ವಜನಿಕರು ಆರೋಗ್ಯ ಇಲಾಖೆ ಜತೆ ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಕಾರ್ಯದರ್ಶಿ ಎಸ್.ನಂದೀಶ್‌ಕುಮಾರ್, ಕೋಶಾಧ್ಯಕ್ಷ ಜಿ.ಶ್ರೀನಿವಾಸ್, ರಾಜ್ಯ ಸಮಿತಿ ಸದಸ್ಯ ಎಸ್‌.ಸಿ.ವೆಂಕಟಕೃಷ್ಣಪ್ಪ, ಶ್ರೀನಿವಾಸಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.