ADVERTISEMENT

ವೇಮಗಲ್: ಸ್ವಚ್ಛತಾ ಆಂದೋಲನ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2025, 8:22 IST
Last Updated 23 ಡಿಸೆಂಬರ್ 2025, 8:22 IST
ಸ್ವಚ್ಛತಾ ಆಂದೋಲನ ಅಂಗವಾಗಿ ವೇಮಗಲ್ ನಗರವನ್ನು ಬೃಹತ್ ಯಂತ್ರಗಳ ಮೂಲಕ ನಗರದ ತ್ಯಾಜ್ಯ ಹಾಗೂ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು
ಸ್ವಚ್ಛತಾ ಆಂದೋಲನ ಅಂಗವಾಗಿ ವೇಮಗಲ್ ನಗರವನ್ನು ಬೃಹತ್ ಯಂತ್ರಗಳ ಮೂಲಕ ನಗರದ ತ್ಯಾಜ್ಯ ಹಾಗೂ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು   

ವೇಮಗಲ್: ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಸ್ವಚ್ಛತಾ ಆಂದೋಲನಕ್ಕೆ ವೇಮಗಲ್‌ನ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಿ.ಎಸ್.ವೆಂಕಟೇಶ್ ಸೋಮವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ನಮ್ಮ ಪಟ್ಟಣದ ಸ್ವಚ್ಛತೆಯೇ ಮುಖ್ಯ. ಪಟ್ಟಣದಲ್ಲಿನ ಪ್ಲಾಸ್ಟಿಕ್ ಬಳಕೆ ಮಾಡುವ ಅಂಗಡಿ ಮಾಲೀಕರಿಗೆ ಈಗಾಗಲೇ ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸಲಾಗಿದೆ. ಆದರೂ ಪ್ಲಾಸ್ಟಿಕ್ ಬಳಕೆ ಮಾಡಿದರೆ ಯಾವುದೇ ಮುಲಾಜಿಲ್ಲದೆ ದಂಡ ವಿಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪಟ್ಟಣದ ಅಭಿವೃದ್ಧಿ ಕೇವಲ ರಸ್ತೆ, ಚರಂಡಿ ನಿರ್ಮಾಣಕ್ಕೆ ಸೀಮಿತವಾಗಿಲ್ಲ. ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸ್ವಚ್ಛತೆ ಅಗತ್ಯ. ಪಟ್ಟಣವನ್ನು ಸುಂದರವಾಗಿ ಮತ್ತು ಪ್ಲಾಸ್ಟಿಕ್ ಮುಕ್ತವಾಗಿ ಇಟ್ಟುಕೊಳ್ಳುವುದು ಕೇವಲ ಪಂಚಾಯಿತಿ ಕೆಲಸವಲ್ಲ, ಇದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದರು.

ADVERTISEMENT

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಂ.ವೆಂಕಟೇಶ್ ಮಾತನಾಡಿ, ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣವಾಗಿ ನಿಷೇಧಿಸಲು ಕ್ರಮವಹಿಸಲಾಗಿದೆ. ಹಾಗಾಗಿ ಪ್ಲಾಸ್ಟಿಕ್ ಬದಲು ವ್ಯಾಪಾರಿಗಳು ಮತ್ತು ಗ್ರಾಹಕರು ಬಟ್ಟೆ ಚೀಲ ಬಳಸಿ. ಜೊತೆಗೆ ಹಸಿ ಕಸ ಮತ್ತು ಒಣ ಕಸ ವಿಂಗಡಿಸಿ ಪಂಚಾಯಿತಿ ವಾಹನಗಳಿಗೆ ನೀಡಬೇಕು. ಈ ಮೂಲಕ ತ್ಯಾಜ್ಯ ವಿಲೇವಾರಿ ಸುಲಭವಾಗುತ್ತದೆ ಎಂದು ತಿಳಿಸಿದರು.

ಪಟ್ಟಣದ ಪಂಚಾಯಿತಿ ವ್ಯಾಪ್ತಿಯ ವಿವಿಧ ರಸ್ತೆ, ಖಾಲಿ ಜಾಗಗಳಲ್ಲಿ ಸಂಗ್ರಹವಾಗಿದ್ದ ಕಸ, ಅನುಪಯುಕ್ತ ವಸ್ತುಗಳನ್ನು ವಿಲೇವಾರಿ ಮಾಡಲಾಯಿತು. ಜೊತೆಗೆ ಚರಂಡಿಯನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯಲು ಅನುವು ಮಾಡಲಾಗಿದೆ ಎಂದರು.

ಸ್ವಚ್ಛತಾ ಆಂದೋಲನಕ್ಕೆ ಆರು ತಂಡಗಳನ್ನು ರಚಿಸಿದ್ದು, ನಗರವನ್ನು ಸ್ವಚ್ಛಗೊಳಿಸಿ ಸುಂದರಗೊಳಿಸಿದ್ದಾರೆ.

ಅನುಷಾ.ಡಿ ಮುನಿರಾಜು, ವಿ.ಎಂ.ನಾಗೇಶ್, ರಾಮು, ಶಶಿಕಲಾ ನಾಗೇಶ್, ದೀಪ ವೆಂಕಟೇಶ್, ಶಿಲ್ಪ ಶಿವಶಂಕರ್, ಗಂಗಪ್ಪ, ನಟರಾಜ್, ತಿರುಮಲೇಶ್, ಸನಾವುಲ್ಲಾ ಖಾನ್, ಶಿವಕುಮಾರ್, ಮೈಲಾರಸ್ವಾಮಿ, ಗಜಾನನ, ಪೌರಕಾರ್ಮಿಕರು ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.