ಬಂಗಾರಪೇಟೆ: ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆದು ರೈತರಿಗೆ ಮತ್ತು ಮಹಿಳೆಯರಿಗೆ ತಲುಪುವಂತೆ ಮಾಡುವುದಾಗಿ ಶಾಸಕ ಹಾಗೂ ಕೋಮುಲ್ ನಿರ್ದೇಶಕ ಎಸ್.ಎನ್ ನಾರಾಯಣಸ್ವಾಮಿ ಭರವಸೆ ನೀಡಿದರು.
ತಾಲ್ಲೂಕಿನ ನತ್ತಬೆಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ ಭಾನುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.
ತಾಲ್ಲೂಕಿನಲ್ಲಿ ಕೇವಲ 30ರಿಂದ 40 ಹಾಲು ಉತ್ಪಾದಕರ ಸಹಕಾರ ಸಂಘಗಳ ಇವೆ. ಆದರೆ, ಮುಳುಬಾಗಿಲು, ಮಾಲೂರು, ಕೋಲಾರದಲ್ಲಿ ಹೆಚ್ಚಿನ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸ್ಥಾಪಿಸಲಾಗಿದೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನ ಪ್ರತಿಯೊಂದು ಗ್ರಾಮಕ್ಕೂ ಹಾಲು ಉತ್ಪಾದಕರ ಸಹಕಾರ ಸಂಘ ಪ್ರಾರಂಭಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.
ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರದ ವಾಸನೆ ಇದ್ದು ಮುಂದಿನ ದಿನಗಳಲ್ಲಿ ಸತ್ಯ ಹೊರ ಬರಲಿದೆ ಎಂದು ತಿಳಿಸಿದರು.
ಕಾರ್ಯದರ್ಶಿ ಗೋವಿಂದಪ್ಪ, ಬೂದಿಕೋಟೆ ಸಮಾಜ ಸೇವಕ ಎ.ಬಾಬು, ಆಲಂಬಾಡಿ ಜ್ಯೋತೇನಹಳ್ಳಿ ಗ್ರಾ.ಪಂ ಅಧ್ಯಕ್ಷೆ ನಾರಾಯಣಮ್ಮ, ಬೂದಿಕೋಟೆ ಗ್ರಾ.ಪಂ ಅಧ್ಯಕ್ಷ ಬಿ.ಆರ್ ಮಂಜುನಾಥ, ಕಾರಮಾನಹಳ್ಳಿ ಮುನಿಸ್ವಾಮಿ, ಜುಂಜನಹಳ್ಳಿ ನಾರಾಯಣಸ್ವಾಮಿ, ಚಂದ್ರಶೇಖರ್, ಮುನಿವೆಂಕಟಸ್ವಾಮಿ, ನರೇಶ್, ಕೊಂಡೇನಹಳ್ಳಿ ಸುರೇಶ್,ಆಲಂಬಾಡಿ ಗ್ರಾ.ಪಂ.ಸದಸ್ಯರಾದ ಸುರೇಶ್, ಮುನಿಚಂದ್ರ, ನಾರಾಯಣಪ್ಪ, ಮುನಿಯಪ್ಪ, ಶ್ರೀಕಾಂತ್, ಅಮರೇಶ್, ಮುನಿರಾಜು, ಆನಂದ್, ಬನಹಳ್ಳಿ ಶ್ರೀನಿವಾಸ್, ಮುನಿಯಪ್ಪ, ಮುನಿಸ್ವಾಮಿಗೌಡ, ನಾಗಣ್ಣ, ವಿಜಯ್ ಕುಮಾರ್, ರಾಜಣ್ಣ, ರಮೇಶ್, ರಾಮಕೃಷ್ಣಪ್ಪ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.