ADVERTISEMENT

ಬಂಗಾರಪೇಟೆ: ಶಾಸಕ ನಾರಾಯಣಸ್ವಾಮಿಗೆ ಸಚಿವ ಸ್ಥಾನ ನೀಡಬೇಕೆಂದು ರಕ್ತದಲ್ಲಿ ಪತ್ರ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 6:43 IST
Last Updated 3 ಡಿಸೆಂಬರ್ 2025, 6:43 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬಂಗಾರಪೇಟೆ: ತಾಲ್ಲೂಕಿನ ಶಾಸಕ ಎಸ್.ಎನ್.ನಾರಾಯಣಸ್ವಾಮಿಗೆ ಸಂಪುಟ ಪುನರ್‌ ರಚನೆಯಾದರೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಎಸ್‌.ಎನ್.ಯುವ ಸೇನೆ ಕಾರ್ಯಕರ್ತರು ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಶಾಸಕ ಎಸ್.ಎನ್.ನಾರಾಯಣಸ್ವಾಮಿ ಸತತ ಮೂರು ಬಾರಿ ಶಾಸಕರಾಗಿದ್ದಾರೆ. ಅವರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಹಾಗಾಗಿ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ADVERTISEMENT

ಜನವರಿಯಲ್ಲಿ ಸಂಪುಟ ಪುನರ್ ರಚನೆ ಬಹುತೇಕ ಖಚಿತವಾಗಿದೆ. ಹಾಗಾಗಿ ಈ ಬಾರಿ ಸಚಿವ ಸ್ಥಾನ ನೀಡಬೇಕೆಂದು ಸಿ.ಎಂ.ಹರೀಶ್, ನವೀನ್‌ಗೌಡ, ಜಬಿ ಉಲ್ಲಾ, ವೆಂಕಟರಾಜ್, ದೀಪಕ್, ವೆಂಕಟರಮಣ, ಮುತ್ತುಕುಮಾರ್, ರಾಜು ಆಚಾರಿ, ನೆತ್ತಿಬೆಲೆ ರಮೇಶ್, ಅ.ನಾ.ಹರೀಶ್ ಇತರರು ಬರೆದಿರುವ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.