ಕೋಲಾರ: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸಚಿವ ಸಂಪುಟದ ಸಭೆಯಲ್ಲಿ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಶ್ರೀನಿವಾಸಪುರ ತಾಲ್ಲೂಕಿನ ಮಾವಿನ ಹಣ್ಣಿಗೆ ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಪ್ರಸಿದ್ಧಿ ಪಡೆದಿದ್ದು, ರೈತರು ನಿರ್ದಿಷ್ಟ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗಾಗಲೇ ಪಕ್ಕದ ಆಂಧ್ರ ಪ್ರದೇಶ ಸರ್ಕಾರವು ನಮ್ಮ ತೋತಾಪುರಿ ಮಾವಿನ ಹಣ್ಣಿನ ಮಾರಾಟಕ್ಕೆ ನಿರ್ಬಂಧ ವಿಧಿಸಿದ್ದು, ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ ಎಂದಿದ್ದಾರೆ.
‘ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ನಮ್ಮ ಸರ್ಕಾರ ರೈತರ ಪರವಾಗಿದ್ದು, ಬೆಂಬಲ ಬೆಲೆ ನಿಗದಿಪಡಿಸಲು ನಾನು ಕೂಡ ಒತ್ತಾಯಿಸಿದ್ದೇನೆ’ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಧ್ವನಿಗೂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.