
ಶ್ರೀನಿವಾಸಪುರ: ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಭೂಮಿಪೂಜೆ ನೆರವೇರಿಸಿದರು.
ಪಾತಕೋಟೆಯ ರಸ್ತೆ ಕಾಮಗಾರಿ ನಡೆಸಲು ಸೂಚಿಸಲಾಗಿದೆ. ಗೌಡತಾತಗಡ್ಡ, ಪುಲಗೂರಕೋಟೆ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಸಾತನೂರು ಗೊಲ್ಲಪಲ್ಲಿ ಗ್ರಾಮದಲ್ಲಿ ಬಾಕಿ ಉಳಿದಿದ್ದ ಅಂದಾಜು ₹ 60ಲಕ್ಷದಲ್ಲಿ ಸಿಸಿ ರಸ್ತೆ ಮಾಡಿಸಿದ್ದೇನೆ ಎಂದು ಹೇಳಿದರು.
ಬುರಕಾಯಿಲಕೋಟ, ದೇವರೆಡ್ಡಿಪಲ್ಲಿ ವಿವಿಧ ಕಾಮಗಾರಿಗಳನ್ನ ಹಮ್ಮಿಕೊಳ್ಳಲಾಗುವುದು. ವಾರದ ನಂತರ ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆ ಆಲಿಸುತ್ತೇನೆ. ಮುಖಂಡರು, ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದರು.
ಎಂಐಡಿಪಿ ಯೋಜನೆಯಡಿಯಲ್ಲಿ ಆಂಜನೇಯ ದೇವಾಲಯದ ಬಳಿ ಸಿಸಿ ರಸ್ತೆಗೆ ₹ 60ಲಕ್ಷ, ಕಾಲೊನಿಯಲ್ಲಿನ ವಿವಿಧ ಕಾಮಗಾರಿಗಳಿಗೆ ₹ 45ಲಕ್ಷ ಅನುದಾನದಲ್ಲಿ ಕಾಮಗಾರಿ ನಡೆಯಲಿದೆ. ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದೊಂದಿಗೆ, ನಿಗದಿತ ಸಮಯದೊಳಗೆ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಸೂಚನೆ ನೀಡಿದರು.
ಅನುದಾನ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಇದೇ ತಿಂಗಳು 17 ರಂದು ನ್ಯಾಯಾಲದಲ್ಲಿ ತೀರ್ಪು ಬರುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದರು.
ಮುಖಂಡರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಬಾಲವತಿಜಯರಾಮ್, ಜಿ.ಎನ್.ಶ್ರೀನಿವಾಸರೆಡ್ಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.