ADVERTISEMENT

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆ; ಅನಿಲ್‌ಕುಮಾರ್ ಪ್ರಮಾಣವಚನ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 16:19 IST
Last Updated 17 ಜನವರಿ 2022, 16:19 IST
ವಿಧಾನ ಪರಿಷತ್ ನೂತನ ಸದಸ್ಯ ಎಂ.ಎಲ್.ಅನಿಲ್‌ಕುಮಾರ್ ಬೆಂಗಳೂರಿನಲ್ಲಿ ಸೋಮವಾರ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು
ವಿಧಾನ ಪರಿಷತ್ ನೂತನ ಸದಸ್ಯ ಎಂ.ಎಲ್.ಅನಿಲ್‌ಕುಮಾರ್ ಬೆಂಗಳೂರಿನಲ್ಲಿ ಸೋಮವಾರ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು   

ಕೋಲಾರ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ಎಂ.ಎಲ್.ಅನಿಲ್‌ಕುಮಾರ್‌ ಅವರು ಬೆಂಗಳೂರಿನಲ್ಲಿ ಸೋಮವಾರ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ದೇವರ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದ ಅನಿಲ್‌ಕುಮಾರ್‌, ‘ಜನಪರವಾಗಿ ಕಾರ್ಯ ನಿರ್ವಹಿಸುತ್ತೇನೆ. ಅವಿಭಜಿತ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸದಸ್ಯರು, ಪಕ್ಷದ ಎಲ್ಲಾ ಶಾಸಕರು, ಮಾಜಿ ಶಾಸಕರು ಮತ್ತು ಮುಖಂಡರ ಸಹಕಾರದಿಂದ ಗೆಲುವು ಸಾಧಿಸಿದ್ದು, ಅವರ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತೇನೆ’ ಎಂದು ಹೇಳಿದರು.

‘ಅವಳಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ಸೌಲಭ್ಯ ಒದಗಿಸುವ ಹಾದಿಯಲ್ಲಿ ಪರಿಷತ್ತಿನಲ್ಲಿ ಧ್ವನಿಯಾಗಿ ಕೆಲಸ ಮಾಡುವೆ. ಜನರ ನಿರೀಕ್ಷೆಗೆ ತಕ್ಕಂತೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಅಭಿವೃದ್ಧಿಗೆ ಶಕ್ತಿ ಮೀರಿ ಕಾರ್ಯ ನಿರ್ವಹಿಸುತ್ತೇನೆ’ ಎಂದು ಭರವಸೆ ನೀಡಿದರು.

ADVERTISEMENT

ಪ್ರಮಾಣವಚನ ಸಂದರ್ಭದಲ್ಲಿ ಹಾಜರಿದ್ದ ಶಾಸಕರಾದ ಕೆ.ಆರ್‌.ರಮೇಶ್‌ಕುಮಾರ್‌, ಕೆ.ಶ್ರೀನಿವಾಸಗೌಡ, ಕೃಷ್ಣಬೈರೇಗೌಡ, ಕೆ.ವೈ.ನಂಜೇಗೌಡ, ನಸೀರ್ ಅಹಮ್ಮದ್, ಜಿಲ್ಲಾ ಸಹಕಾರಿ ಒಕ್ಕೂಟದ ನಿರ್ದೇಶಕ ಬಿ.ರಮೇಶ್ ಅವರು ಅನಿಲ್‌ಕುಮಾರ್‌ರನ್ನು ಅಭಿನಂದಿಸಿದರು.ಅನಿಲ್‌ಕುಮಾರ್‌ ಕುಟುಂಬ ಸದಸ್ಯರು, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ನೀಲಕಂಠೇಗೌಡ, ಮೋಹನ್‌ರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.