ADVERTISEMENT

‘ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಜ್ಜಾಗಿ’

‘ಪ್ರಜಾವಾಣಿ’, ‘ಡೆಕ್ಕನ್‌ ಹೆರಾಲ್ಡ್‌’ನಿಂದ ಪದವಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 3:40 IST
Last Updated 3 ಸೆಪ್ಟೆಂಬರ್ 2021, 3:40 IST
ಮಾಲೂರು ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತ ಕಾರ್ಯಾಗಾರವನ್ನು ಕಾಂಗ್ರೆಸ್ ಯುವ ಮುಖಂಡ ಸುನೀಲ್ ಉದ್ಘಾಟಿಸಿದರು. ಪುರಸಭೆ ಮಾಜಿ ಸದಸ್ಯ ಪ್ರದೀಪ್ ರೆಡ್ಡಿ, ಪ್ರಸರಣ ವಿಭಾಗದ ಡಿಜಿಎಂ ಜಗನ್ನಾಥ್ ಜೋಯಿಸ್ ಹಾಜರಿದ್ದರು(ಎಡಚಿತ್ರ). ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು
ಮಾಲೂರು ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತ ಕಾರ್ಯಾಗಾರವನ್ನು ಕಾಂಗ್ರೆಸ್ ಯುವ ಮುಖಂಡ ಸುನೀಲ್ ಉದ್ಘಾಟಿಸಿದರು. ಪುರಸಭೆ ಮಾಜಿ ಸದಸ್ಯ ಪ್ರದೀಪ್ ರೆಡ್ಡಿ, ಪ್ರಸರಣ ವಿಭಾಗದ ಡಿಜಿಎಂ ಜಗನ್ನಾಥ್ ಜೋಯಿಸ್ ಹಾಜರಿದ್ದರು(ಎಡಚಿತ್ರ). ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು   

ಮಾಲೂರು: ‘ರಾಜ್ಯದ ಗಡಿ ಭಾಗ ಒಳಗೊಂಡಂತೆ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಿಂದೆ ಉಳಿದಿದ್ದು ಈ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು’ ಎಂದು ಕಾಂಗ್ರೆಸ್ ಯುವ ಮುಖಂಡ ಸುನೀಲ್ ಸಲಹೆ ನೀಡಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಗುರುವಾರ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ವಿದ್ಯಾರ್ಥಿಗಳು ಅವಕಾಶ ವಂಚಿತರಾಗಬಾರದು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಂಡು ಉತ್ತೀರ್ಣರಾಗುವ ಮೂಲಕ ಉತ್ತಮ ಫಲಿತಾಂಶ ಪಡೆಯಬೇಕು. ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆ ವತಿಯಿಂದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದಲ್ಲಿ ಭಾಗವಹಿಸಿ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಶಾಸಕ ಕೆ.ವೈ. ನಂಜೇಗೌಡ ವಿದ್ಯಾರ್ಥಿಗಳಿಗೆ ನೆರವು ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉನ್ನತ ಸ್ಥಾನ ಪಡೆಯಬೇಕು ಎಂದು ತಿಳಿಸಿದರು.

ಪುರಸಭೆ ಮಾಜಿ ಸದಸ್ಯ ಪ್ರದೀಪ್ ರೆಡ್ಡಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾರ್ಥಿಗಳು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳನ್ನೇ ಹೆಚ್ಚಾಗಿ ಓದುತ್ತಾರೆ. ಈ ಪತ್ರಿಕೆಗಳಲ್ಲಿನ ಸುದ್ದಿಗಳು ನೈಜತೆಯಿಂದ ಕೂಡಿರುತ್ತವೆ ಎಂದರು.

ಪ್ರಸಕ್ತ ದಿನಗಳಲ್ಲಿ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಪಡೆಯಬೇಕಾದರೆ ವರ್ಷಕ್ಕೆ ₹ 2 ಲಕ್ಷದಿಂದ ₹ 3 ಲಕ್ಷ ವ್ಯಯ ಮಾಡಬೇಕಾಗುತ್ತದೆ. ಕೆ.ವೈ. ನಂಜೇಗೌಡ ಅವರು ಗ್ರಾಮೀಣ ಭಾಗದ ಪದವೀಧರ ವಿದ್ಯಾರ್ಥಿಗಳ ಅನುಕೂಲಕ್ಕೆ ನೆರವಾಗುವ ನಿಟ್ಟಿನಲ್ಲಿ ಕಾರ್ಯಾಗಾರವನ್ನು ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸುತ್ತಿದ್ದಾರೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಪುರಸಭೆ ಮಾಜಿ ಸದಸ್ಯ ಪ್ರದೀಪ್ ರೆಡ್ಡಿ, ಕಾಲೇಜಿನ ಪ್ರಾಂಶುಪಾಲ ವೆಂಕಟೇಶಪ್ಪ, ಉಪನ್ಯಾಸಕರಾದ ಅನಂತಮೂರ್ತಿ, ರಾಮಾಂಜಿನಪ್ಪ, ರಂಗಪ್ಪ, ಬಾಬು, ‘ಪ್ರಜಾವಾಣಿ’ ಪತ್ರಿಕೆಯ ಪ್ರಸರಣ ವಿಭಾಗದ ಡಿಜಿಎಂ ಜಗನ್ನಾಥ್ ಜೋಯಿಸ್, ಹಿರಿಯ ವ್ಯವಸ್ಥಾಪಕ ಟಿ.ಎಂ. ಬಸವರಾಜ್, ಮುಖಂಡರಾದ ರಘುನಾಯ್ಡು, ಕಿರಣ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.