ಮುಳಬಾಗಿಲು: ತಾಲ್ಲೂಕಿನ ದೇವರಾಯ ಸಮುದ್ರ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹತ್ತನೇ ತರಗತಿಯಲ್ಲಿ 100% ಫಲಿತಾಂಶ ಸಾಧಿಸಿದೆ.
ಪರೀಕ್ಷೆಗೆ ಕುಳಿತಿದ್ದ 43 ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ದರ್ಜೆ, 27 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಪಾಸಾಗುವ ಮೂಲಕ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ಪ್ರಾಂಶುಪಾಲ ನವೀದ್ ತಿಳಿಸಿದರು.
ಟಿ.ಎಸ್. ಸಹನಾ 594/625 ( 95.04%), ಎನ್.ವಿನೋದ್ ಕುಮಾರ್ 579( 92.64%), ಜೆ.ಮೇಗನಾ 572 (91.52%) , ಮಹೇಶ್ 572 (91.52%) ಹಾಗೂ ಕೆ.ಸಿ. ನಂದಿನಿ 569 (91.04) ಅಂಕಗಳನ್ನು ಪಡೆಯುವ ಮೂಲಕ ಅತ್ಯುನ್ನತ ದರ್ಜೆಯಲ್ಲಿ ಪಾಸಾಗಿದ್ದಾರೆ. 6 ವಿದ್ಯಾರ್ಥಿಗಳು ಶೇಕಡಾ 90ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.