ADVERTISEMENT

ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 14 ಮೇ 2021, 14:13 IST
Last Updated 14 ಮೇ 2021, 14:13 IST

ಕೋಲಾರ: ಜಿಲ್ಲೆಯಲ್ಲಿ ಮುಂದಿನ 4 ದಿನಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಮೇ 18ನೇ ತಾರೀಖಿನವರೆಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಾಗ ಕಡ್ಡಾಯವಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ.

ಮೇ 15ರಂದು ಬಂಗಾರಪೇಟೆ ತಾಲ್ಲೂಕಿನಲ್ಲಿ 4.5 ಮಿ.ಮೀ, ಕೋಲಾರ ತಾಲ್ಲೂಕಿನಲ್ಲಿ 3.1 ಮಿ.ಮೀ, ಮಾಲೂರು ತಾಲ್ಲೂಕಿನಲ್ಲಿ 5.6 ಮಿ.ಮೀ, ಮುಳಬಾಗಿಲು ತಾಲ್ಲೂಕಿನಲ್ಲಿ 2.1 ಮಿ.ಮೀ ಹಾಗೂ ಶ್ರೀನಿವಾಸಪುರ ತಾಲ್ಲೂಕಿನಲ್ಲಿ 1.7 ಮಿ.ಮೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಹೇಳಿದ್ದಾರೆ.

ADVERTISEMENT

ಮೇ 16ರಂದು ಬಂಗಾರಪೇಟೆ ತಾಲ್ಲೂಕಿನಲ್ಲಿ 74.4 ಮಿ.ಮೀ, ಕೋಲಾರ ತಾಲ್ಲೂಕಿನಲ್ಲಿ 64.4 ಮಿ.ಮೀ, ಮಾಲೂರು ತಾಲ್ಲೂಕಿನಲ್ಲಿ 79.6 ಮಿ.ಮೀ, ಮುಳಬಾಗಿಲು ತಾಲ್ಲೂಕಿನಲ್ಲಿ 50.4 ಮಿ.ಮೀ ಮತ್ತು ಶ್ರೀನಿವಾಸಪುರ ತಾಲ್ಲೂಕಿನಲ್ಲಿ 42.8 ಮಿ.ಮೀ ಮಳೆಯಾಗುವ ಮುನ್ಸೂಚನೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.