ಕೋಲಾರ: ‘ಜಿಲ್ಲೆಯ ಕೆಲ ಅಧಿಕಾರಿಗಳು ಹಿಂದೂ ಹಾಗೂ ಮುಸ್ಲಿಂ ಸಮುದಾಯವರನ್ನು ಬೇರ್ಪಡಿಸುತ್ತಿದ್ದಾರೆ’ ಎಂದು ಸಂಸದ ಎಸ್.ಮುನಿಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಬೇಕು, ಅದು ಬಿಟ್ಟು ಧರ್ಮಗಳ ಮಧ್ಯೆ ಕೋಮು ದ್ವೇಷದ ಬೀಜ ಬಿತ್ತುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು’ ಎಂದರು.
‘ಹಿಂದೂಗಳು ಮತ್ತು ಅಲ್ಪಸಂಖ್ಯಾತ ಸಮುದಾಯವರು ಒಟ್ಟಾಗಿ ಸೌಹಾರ್ದತೆಯಿಂದ ಇರಬೇಕು. ಎಲ್ಲಾ ಹಬ್ಬಗಳನ್ನು ಒಟ್ಟಾಗಿ ಆಚರಣೆ ಮಾಡಬೇಕು. ನಗರದಲ್ಲಿ ಒಂದು ವೃತ್ತ ಹಿಂದೂಗಳದ್ದು, ಮತ್ತೊಂದು ವೃತ್ತ ಮುಸ್ಲಿಮರದು ಎಂಬ ಬೇಧಭಾವ ಇರಬಾರದು’ ಎಂದು ಪೌರತ್ವ ಕಾಯ್ದೆ ಬೆಂಬಲಿಸಿ ಬಿಜೆಪಿ ನಡೆಸಲು ಉದ್ದೇಶಿಸಿದ್ದ ಮೆರವಣಿಗೆಗೆ ಅವಕಾಶ ನೀಡದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
‘ಕೋಲಾರ ಜಿಲ್ಲಾ ಕೇಂದ್ರದಲ್ಲಿ ಕೆಲ ಅನುಮಾನಾಸ್ಪದ ವ್ಯಕ್ತಿಗಳು ವಾಸವಾಗಿದ್ದರೆ. ಅಂತಹವರ ವಿರುದ್ಧ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.