ADVERTISEMENT

ಮೇಡಿತಂಬಿಹಳ್ಳಿ ಎಂಪಿಸಿಎಸ್: ಅವಿರೋಧ ಆಯ್ಕೆ

​ಪ್ರಜಾವಾಣಿ ವಾರ್ತೆ
Published 14 ಮೇ 2022, 13:17 IST
Last Updated 14 ಮೇ 2022, 13:17 IST
ಕೋಲಾರ ತಾಲ್ಲೂಕಿನ ಮೇಡಿತಂಬಿಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಆಯ್ಕೆಯಾದ ನೂತನ ಅಧ್ಯಕ್ಷೆ ಎನ್‌.ಸುನಿತಾ, ಉ‍ಪಾಧ್ಯಕ್ಷೆ ಹೇಮಾ ಹಾಗೂ ನಿರ್ದೇಶಕರು ಸಂಭ್ರಮಿಸಿದರು
ಕೋಲಾರ ತಾಲ್ಲೂಕಿನ ಮೇಡಿತಂಬಿಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಆಯ್ಕೆಯಾದ ನೂತನ ಅಧ್ಯಕ್ಷೆ ಎನ್‌.ಸುನಿತಾ, ಉ‍ಪಾಧ್ಯಕ್ಷೆ ಹೇಮಾ ಹಾಗೂ ನಿರ್ದೇಶಕರು ಸಂಭ್ರಮಿಸಿದರು   

ಕೋಲಾರ: ತಾಲ್ಲೂಕಿನ ಮೇಡಿತಂಬಿಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷರಾಗಿ ಎನ್‌.ಸುನಿತಾ ಹಾಗೂ ಉಪಾಧ್ಯಕ್ಷರಾಗಿ ಹೇಮಾ ಅವಿರೋಧ ಆಯ್ಕೆಯಾಗಿದ್ದಾರೆ.

ಎಂಪಿಸಿಎಸ್‍ಗೆ ಶನಿವಾರ ನಡೆದ ಚುನಾವಣೆಯಲ್ಲಿ 12 ಮಂದಿ ನಿರ್ದೇಶಕರಾಗಿ ಆಯ್ಕೆಯಾದರು. ಈ ಪೈಕಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಸುನಿತಾ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಿದ ಹೇಮಾ ಅವರ ವಿರುದ್ಧ ಯಾರೂ ಕಣಕ್ಕಿಳಿಯಲಿಲ್ಲ. ಹೀಗಾಗಿ ಚುನಾವಣಾಧಿಕಾರಿ ಗಾಯತ್ರಿ ಅವರು ಇಬರಿಬ್ಬರೂ ಅವಿರೋಧ ಆಯ್ಕೆಯಾಗಿರುವುದಾಗಿ ಘೋಷಿಸಿದರು.

ಚುನಾವಣೆ ಬಳಿಕ ಮಾತನಾಡಿದ ನೂತನ ಅಧ್ಯಕ್ಷೆ ಸುನಿತಾ, ‘ಹಾಲು ಉತ್ಪಾದಕರಿಗೆ ನ್ಯಾಯ ಒದಗಿಸುವ ಮೂಲಕ ಪಾರದರ್ಶಕ ಆಡಳಿತಕ್ಕೆ ಒತ್ತು ಕೊಡುತ್ತೇನೆ. ಅವ್ಯವಹಾರಕ್ಕೆ ತಡೆ, ಲಾಭ ಗಳಿಸುವ ಮೂಲಕ ಲಾಭವನ್ನು ಉತ್ಪಾದಕರಿಗೆ ಹಂಚುವ ಪ್ರಾಮಾಣಿಕ ಪ್ರಯತ್ನ ನನ್ನ ಗುರಿಯಾಗಿದೆ’ ಎಂದು ತಿಳಿಸಿದರು.

ADVERTISEMENT

‘ಹೈನೋದ್ಯಮದಲ್ಲಿ ಮಹಿಳೆಯರದೇ ಹೆಚ್ಚಿನ ಶ್ರಮವಿದೆ. ಅವರಿಗೆ ನ್ಯಾಯ ಒದಗಿಸುವ ಮೂಲಕ ಸಂಘವನ್ನು ಬಲಿಷ್ಠವಾಗಿ ಮುನ್ನಡೆಸಿಕೊಂಡು ಹೋಗುತ್ತೇವೆ. ನನ್ನ ಆಯ್ಕೆಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.