ADVERTISEMENT

ಮುಳಬಾಗಿಲು ನಗರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2019, 7:20 IST
Last Updated 14 ನವೆಂಬರ್ 2019, 7:20 IST
   

ಕೋಲಾರ: ಜಿಲ್ಲೆಯ ಮುಳಬಾಗಿಲು ನಗರಸಭೆಯ 31 ವಾರ್ಡ್‌ಗಳಲ್ಲಿ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ.

10 ವಾರ್ಡ್‌ಗಳಲ್ಲಿ ಜೆಡಿಎಸ್, 7 ವಾರ್ಡ್‌ಗಳಲ್ಲಿ ಕಾಂಗ್ರೆಸ್, 2 ವಾರ್ಡ್‌ಗಳಲ್ಲಿ ಬಿಜೆಪಿ, 1 ವಾರ್ಡ್‌ಗಳಲ್ಲಿ ಎಸ್ಡಿಪಿಐ ಹಾಗೂ 11 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಪ್ರತಿನಿಧಿಸುವ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಗರಸಭೆಯಲ್ಲೇ ಬಿಜೆಪಿ ತೀವ್ರ ಹಿನ್ನಡೆ ಅನುಭವಿಸಿರುವುದು ಗಮನಾರ್ಹ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.