ADVERTISEMENT

ಮುಳಬಾಗಿಲು: ಸಾವಿತ್ರಿಬಾಯಿ ಫುಲೆ ಜಯಂತಿ

​ಪ್ರಜಾವಾಣಿ ವಾರ್ತೆ
Published 19 ಜನವರಿ 2025, 14:45 IST
Last Updated 19 ಜನವರಿ 2025, 14:45 IST
ಮುಳಬಾಗಿಲು ನಗರದಲ್ಲಿ ನಡೆದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು
ಮುಳಬಾಗಿಲು ನಗರದಲ್ಲಿ ನಡೆದ ಸಾವಿತ್ರಿಬಾಯಿ ಫುಲೆ ಜಯಂತಿ ಹಾಗೂ ಉತ್ತಮ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು   

ಮುಳಬಾಗಿಲು: ನಗರದಲ್ಲಿ ಭಾನುವಾರ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ 150 ಉತ್ತಮ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು. 

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಕೆ. ಮೋಹನ್ ಬಾಬು ಮಾತನಾಡಿ, ‘ಸಾವಿತ್ರಿಬಾಯಿ ಫುಲೆ ಅವರಂಥ ಮಹನೀಯರಿಂದಾಗಿ ಇಂದಿನ‌ ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ ಸಿಗುತ್ತಿದೆ’ ಎಂದು ಹೇಳಿದರು. 

ಸಮಾಜದಲ್ಲಿ ಕಡ್ಡಾಯವಾಗಿ 6 ವರ್ಷದ ಮೀರಿದ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಬೇಕು ಎಂಬ ನೀತಿ ಜಾರಿಯಲ್ಲಿದೆ. ಅದರಂತೆ ಸಂವಿಧಾನದ 21 ಎ ನಲ್ಲಿ ಎಲ್ಲರೂ ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕು ಆಗಿದೆ. ಹೀಗಾಗಿ, ಎಲ್ಲ ಮಕ್ಕಳು ತಪ್ಪದೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು ಎಂದರು. 

ADVERTISEMENT

ಎಂ.ಗೊಲ್ಲಹಳ್ಳಿ ಪ್ರಭಾಕರ್ ಮಾತನಾಡಿ, ಅನಾದಿಕಾಲದಿಂದ ಮಹಿಳೆಯರಿಗೆ ಶಿಕ್ಷಣದಲ್ಲಿ ಉತ್ತಮ ಸ್ಥಾನಮಾನ ಸಿಕ್ಕಿರಲಿಲ್ಲ. ಸಾವಿತ್ರಿಬಾಯಿ ಫುಲೆ ಅವರು ಹೆಣ್ಣು ಮಕ್ಕಳಿಗಾಗಿ ಶಾಲೆ ತೆರೆದರು. ತನ್ನ ಪತಿ ಜ್ಯೋತಿ ಬಾಫುಲೆ ಸಹಕರಿಂದ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದರು ಎಂದರು. 

ಈ ಮೂಲಕ ದೇಶದ ಮೊಟ್ಟ ಮೊದಲ ಶಿಕ್ಷಕಿಯಾಗಿ, ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ತನ್ನ ಜೀವನ ಮುಡುಪಾಗಿಟ್ಟರು. ಇವರ ಆದರ್ಶಗಳು ನಮಗೆ ಸ್ಫೂರ್ತಿದಾಯಕವಾಗಿದ್ದು, ಪುರುಷರಷ್ಟೇ ಮಹಿಳೆಯರೂ ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬರಬೇಕು ಎಂದರು. 

ವಕೀಲ ಶ್ರೀನಿವಾಸ್ ರೆಡ್ಡಿ ಮಾತನಾಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಅರವಿಂದ್, ಕ್ಷೇತ್ರ ಸಮನ್ವಯ ಅಧಿಕಾರಿ ಪಿ. ಸೋಮೇಶ್, ವೆಂಕಟಗಿರಿಯಪ್ಪ, ರಹೀಂ ಶರೀಫ್ , ತ. ಸೊಣ್ಣಪ್ಪ, ಓಬಳ ರೆಡ್ಡಿ, ಭಾಸ್ಕರ್ ರೆಡ್ಡಿ ,ಬಿ.ಎಂ. ರಾಮಚಂದ್ರ, ಪದ್ಮಾವತ್ತಮ್ಮ, ಸುಬ್ರಮಣ್ಯ, ಸುಬ್ರಮಣಿ, ರವಿಕುಮಾರ್, ಮಂಜುನಾಥ್, ಕೆ. ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.