ADVERTISEMENT

ಮುಳಬಾಗಿಲು: ಮೊಬೈಲ್ ಆ್ಯಪ್‌ನಲ್ಲಿ ಬೆಳೆ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2021, 14:02 IST
Last Updated 30 ಆಗಸ್ಟ್ 2021, 14:02 IST
 ಮುಳಬಾಗಿಲು ತಾಲ್ಲೂಕಿನ ಭೀಮಾಪುರ ಗ್ರಾಮದಲ್ಲಿ ರೈತರೊಬ್ಬರ ತೋಟದಲ್ಲಿ ಬೆಳೆ ಸಮೀಕ್ಷೆ ಕಾರ್ಯಕ್ಕೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಚಾಲನೆ ನೀಡಿದರು.
 ಮುಳಬಾಗಿಲು ತಾಲ್ಲೂಕಿನ ಭೀಮಾಪುರ ಗ್ರಾಮದಲ್ಲಿ ರೈತರೊಬ್ಬರ ತೋಟದಲ್ಲಿ ಬೆಳೆ ಸಮೀಕ್ಷೆ ಕಾರ್ಯಕ್ಕೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಚಾಲನೆ ನೀಡಿದರು.   

ಮುಳಬಾಗಿಲು: ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಎಲ್ಲಾ ಬೆಳೆಗಳ ಛಾಯಾಚಿತ್ರವನ್ನು ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್‌ನಲ್ಲಿನಿಗದಿತ ಸಮಯದಲ್ಲಿ ಅಪ್ಲೋಡ್ ಮಾಡಿಕೊಂಡರೆ ಹೆಚ್ಚು ಅನುಕೂಲವಾಗುತ್ತದೆಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕರವಿಕುಮಾರ್ ತಿಳಿಸಿದರು.

ತಾಲ್ಲೂಕಿನ ಭೀಮಾಪುರ ಗ್ರಾಮದಲ್ಲಿ ರೈತರೊಬ್ಬರ ತೋಟದಲ್ಲಿ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಬೆಳೆ ಸಮೀಕ್ಷೆ ವಿವರಗಳನ್ನು ಸರ್ಕಾರದವಿವಿಧ ಯೋಜನೆಗಳಿಗೆ ಬಳಸಲಾಗುತ್ತದೆ, ಕನಿಷ್ಠ ಬೆಂಬಲ ಬೆಲೆ, ಬೆಳೆವಿಮೆ, ಕೋವಿಡ್ ಸಂಕಷ್ಟ ಪರಿಹಾರ ಆರ್ಟಿಸಿಯಲ್ಲಿ ಬೆಳೆ ವಿವರ ದಾಖಲಿಸಲು ಬೆಳೆ ಸಮೀಕ್ಷೆ ಹೆಚ್ಚು ಸಹಕಾರಿಯಾಗುತ್ತದೆ. ರೈತರು ಅಪ್ಲೋಡ್ ಮಾಡಲು ಖಾಸಗಿ ನಿವಾಸಿಗಳ ಅಥವಾ ಇಲಾಖೆ ಅಧಿಕಾರಿಗಳ ಸಹಾಯ ಪಡೆಯಬಹುದಾಗಿದೆ. ಪ್ರತಿಯೊಬ್ಬರು ತಮ್ಮ ತೋಟಗಳಲ್ಲಿ ತಾವು ಬೆಳೆ ಬೆಳೆದಿರುವ ಬೆಳೆಯ ಬಗ್ಗೆ ಮಾಹಿತಿ ಸಂಗ್ರಹಿಸುವುದು ಅತ್ಯಗತ್ಯವಾಗಿದೆ ಎಂದರು.

ಕೃಷಿ ಅಧಿಕಾರಿ ಶುಭಾ ಮಾತನಾಡಿ ಆಪ್ಲೋಡ್ ಮಾಡಿರುವ ಬೆಳೆ ಸಮೀಕ್ಷೆ ವಿವರಗಳು ತಪ್ಪಾಗಿದ್ದಲ್ಲಿ ಬೆಳೆ ದರ್ಶಕ್ ಆ್ಯಪ್‌ಮೂಲಕ ಆಕ್ಷೇಪಣಿಗಳನ್ನು ಸಲ್ಲಿಸಿ ಸರಿ ಪಡಿಸಿಕೊಳ್ಳುವುದು.ರೈತರಿಗೆ ಬೆಳೆ ಸಮೀಕ್ಷೆ ಒಂದು ಸುವರ್ಣ ಅವಕಾಶವಾಗಿದ್ದು ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದರು. ವರ್ಷದ ಎಲ್ಲಾ ಹಂಗಾಮುಗಳಲ್ಲಿ ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಅಪ್ಲೋಡ್ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.