ಮುಳಬಾಗಿಲು: ನಗರದ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಪ್ಲಾಸ್ಟಿಕ್ ಮಾರಾಟ ಹಾಗೂ ದಾಸ್ತಾನು ಮಾಡುತ್ತಿದ್ದ ಅಂಗಡಿ ಹಾಗೂ ಗೋದಾಮುಗಳ ಮೇಲೆ ನಗರಸಭೆಯ ಅಧಿಕಾರಿಗಳು ದಾಳಿ ನೆಡೆಸಿ ಸುಮಾರು 180 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ.
ಪೌರಾಯುಕ್ತ ವಿ. ಶ್ರೀಧರ್ ಮಾತನಾಡಿ, ‘ಪ್ಲಾಸ್ಟಿಕ್ ಪರಿಸರದ ಮಹಾ ಶತ್ರು, ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾತ್ರ ಬಳಸಬೇಕು. ಪ್ಲಾಸ್ಟಿಕ್ ಪರಿಸರದ ಮಣ್ಣಿನಲ್ಲಿ ಕರಗದೆ ಉಳಿದು ಬಿಡುತ್ತದೆ. ಇದರಿಂದ ಮಣ್ಣಿನ ಫಲವತ್ತತೆ ನಶಿಸುತ್ತದೆ. ಹೀಗಾಗಿ ನಮ್ಮ ಮುಂದಿನ ಪೀಳಿಗೆ ಸುಂದರ ಹಾಗೂ ಆರೋಗ್ಯವಂತ ಪರಿಸರದಿಂದ ವಂಚಿತವಾಗುತ್ತದೆ’ ಎಂದು ಹೇಳಿದರು.
ಪ್ಲಾಸ್ಟಿಕ್ ಮುಕ್ತ ಮುಳಬಾಗಿಲು ನಗರಸಭೆಯ ಗುರಿಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ದಾಳಿ ನಡೆಸಲಾಗುವುದು. ಇದಕ್ಕೆ ನಗರದ ಎಲ್ಲಾ ವ್ಯಾಪಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಪರಿಸರ ಎಂಜಿನಿಯರ್ ಮಹೇಶ್, ಹಿರಿಯ ಆರೋಗ್ಯ ನಿರೀಕ್ಷಕಿ ವಿ.ಪ್ರತಿಭಾ, ಕಿರಿಯ ಆರೋಗ್ಯ ನಿರೀಕ್ಷಕ ಶಿವಾರೆಡ್ಡಿ, ಅಮೃತ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.